Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಕುಟುಂಬದ ವಶಕ್ಕೆ: ಬಾಳಿಗಾ ಆಸ್ಪತ್ರೆಯ ಮಾನವೀಯ ನೆರವು..!!

Dhrishya News by Dhrishya News
10/10/2025
in ಮುಖಪುಟ
0
ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಕುಟುಂಬದ ವಶಕ್ಕೆ: ಬಾಳಿಗಾ ಆಸ್ಪತ್ರೆಯ ಮಾನವೀಯ ನೆರವು..!!
0
SHARES
30
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 10 : ಮಾನಸಿಕ ಖಿನ್ನತೆಗೆ ಒಳಗಾಗಿ ಕಳೆದ ಮೂರು ದಿನಗಳಿಂದ ಉಡುಪಿ ನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಅಲೆಯುತ್ತಿದ್ದ ಗುರುಪ್ರಸಾದ್ ಭಟ್ (60) ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರ ಸಹಕಾರದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವ್ಯಕ್ತಿಯ ಸಂಬಂಧಿಕರು ಪತ್ತೆಯಾದ ಹಿನ್ನಲೆಯಲ್ಲಿ ಅವರನ್ನು ಕುಟುಂಬದ ವಶಕ್ಕೆ ಒಪ್ಪಿಸಲಾಗಿದೆ.

ಗುರುಪ್ರಸಾದ್ ಭಟ್ ಅವರು ಮೂಲತಃ ಉಡುಪಿ ಮೂಲದವರೇ ಅದರೂ ಮೈಸೂರಲ್ಲಿ ನೆಲೆಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಔಷಧಿ ಸೇವಿಸದೆ ಮಾನಸಿಕ ಉದ್ವೇಗಕ್ಕೆ ಒಳಗಾಗಿ ಮನೆ ಬಿಟ್ಟು ಉಡುಪಿಗೆ ಬಂದಿದ್ದರು. 

ಬಾಳಿಗಾ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ಮಾಡುತ್ತಿದ್ದಾಗ ಆಸ್ಪತ್ರೆಯ ಸಿಬ್ಬಂದಿಗೆ ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ ನೀಡಿದ್ದಾರೆ.

 ಅಂತೆಯೇ ಆಸ್ಪತ್ರೆಯಿಂದ ಮಾಹಿತಿ ಪಡೆದ ಗುರುಪ್ರಸಾದ್ ಭಟ್ ಅವರ ಪತ್ನಿ ಉಡುಪಿಗೆ ಬಂದಿದ್ದು ವಿಶು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಗುರುಪ್ರಸಾದ್ ಅವರನ್ನು ಅವರ ವಶಕ್ಕೆ ಒಪ್ಪಿಸಲಾಯಿತು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ವ್ಯಕ್ತಿಗೆ ಉತ್ತಮ ಕೌನ್ಸಿಲಿಂಗ್ ಮಾಡಿ ಸಂಬಂಧಿಕರನ್ನು ಪತ್ತೆಮಾಡಿ ಕ್ಷೇಮವಾಗಿ ಅವರ ವಶಕ್ಕೆ ನೀಡಿದ ಬಾಳಿಗಾ ಆಸ್ಪತ್ರೆಯ ಸಿಬ್ಬಂದಿಗಳಿಗೆ ವಿಶು ಶೆಟ್ಟಿ ಹಾಗೂ ಗುರುಪ್ರಸಾದ್ ಭಟ್ ಅವರ ಸಂಬಂಧಿಕರು ಕೃತಜ್ಞತೆ ಅರ್ಪಿಸಿದ್ದಾರೆ.

ಯಾವುದೋ ಕಾರಣಕ್ಕೆ ಮಾನಸಿಕ ಅಸ್ವಸ್ಥೆಗೆ ಒಳಗಾದ ವ್ಯಕ್ತಿಗಳ ಬಗ್ಗೆ ತಾತ್ಸಾರ ಮಾಡದೆ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರಿಸಿದಂತಾಗುತ್ತದೆ. ಸಮಾಜ ಇದನ್ನು ಗಮನಿಸಬೇಕು.ತನ್ನ ಕೈಲಾದ ಸಹಾಯ ಮಾಡಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

ಪ್ರಕರಣದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. 

ವ್ಯಕ್ತಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ಸತೀಶ್ ಸುವರ್ಣ ಹಾಗೂ ಹರೀಶ್ ಅಂಬಲಪಾಡಿ ಸಹಕರಿಸಿದ್ದರು.

Previous Post

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್, (ಸಿಐಟಿಯು)ನೇತ್ರತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ..!!

Next Post

ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check