ಬೆಳ್ತಂಗಡಿ:ಅಕ್ಟೋಬರ್ 16 : ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಅನಾರೋಗ್ಯದಿಂದ ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾದ ಅವರು, ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ.








