ಬ್ರಹ್ಮಾವರ : ಅಕ್ಟೋಬರ್ 23:ಚಿರತೆಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಸಾವನಪ್ಪಿದ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರಿನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ನಂಚಾರಿನ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ರಸ್ತೆಗೆ ಬಂದ ಚಿರತೆ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ಸವಾರ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನಪ್ಪಿದೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








