Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಉದ್ಘಾಟನೆ..!!

Dhrishya News by Dhrishya News
29/10/2025
in ಮುಖಪುಟ
0
ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಉದ್ಘಾಟನೆ..!!
0
SHARES
6
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 29:ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರ (IKS) ದಿಂದ ಇದೇ ಬರುವ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭಗೊಳ್ಳಲಿರುವ ಭಗವದ್ಗೀತಾ ಡಿಪ್ಲೊಮಾ ಕೋರ್ಸ್  ನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದರು ಉದ್ಘಾಟಿಸಿದರು. ಒಂದು ವರ್ಷ ಅವಧಿಯ ಒಟ್ಟು ಐದು ಪತ್ರಿಕೆಗಳನ್ನು ಒಳಗೊಂಡ ಈ ಡಿಪ್ಲೊಮಾ ಕೋರ್ಸ್ ನ ಪಾಠದ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗಳೂ ಆನ್ಲೈನ್ ಮೂಲಕ ನಡೆಯಲಿದೆ. ಶ್ರೀ ಪುತ್ತಿಗೆ ಮಠದ ಮಾರ್ಗದರ್ಶನದಲ್ಲಿ ನಡೆಯುವ ಈ ಕೋರ್ಸ್ ನ ಪಠ್ಯಪುಸ್ತಕವಾಗಿ ಶ್ರೀ ಪುತ್ತಿಗೆ ಮಠದ ವತಿಯಿಂದ ಬಿಡುಗಡೆಗೊಂಡ ಗೀತಾಮೃತಸಾರ ಪುಸ್ತಕವನ್ನು ಸ್ವೀಕರಿಸಲಾಗಿದೆ. ಈ ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಅತ್ಯಂತ ಯಶಸ್ವಿಯಾಗಲಿ ಎಂದು ಪೂಜ್ಯ ಶ್ರೀಪಾದರು ಹಾರೈಸಿದರು.

ಕಿರಿಯ ಶ್ರೀಪಾದರಾದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಆಶೀರ್ವಚನ ನೀಡಿದರು. 

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ ಎಸ್ ಮೂಡಿತ್ತಾಯರು ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ಭಾರತೀಯ ಶಿಕ್ಷಣ ವ್ಯವಸ್ಥೆ ಮತ್ತು ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಗಳ ಆವಶ್ಯಕತೆ ಹಾಗೂ ಹಿನ್ನೆಲೆಯನ್ನು ವಿವರಿಸಿದರು. 

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಖ್ಯಾತ ಪುರಾತತ್ವ ಶಾಸ್ತ್ರಜ್ಞರಾದ ಪದ್ಮಶ್ರೀ ಕೆ ಕೆ ಮೊಹಮ್ಮದ್ ಹಾಗೂ ಟೆಂಪ್ಲೆಕ್ಸ್ ಸಿಟಿ ಖ್ಯಾತ ಬರಹಗಾರ ಶ್ರೀ ಸುರೇಂದ್ರನಾಥ್ ಬೋಪ್ಪರಾಜು ಮತ್ತು ಹಿರಿಯ ಸಂಶೋಧಕ ವಿದ್ವಾಂಸರಾದ ಪ್ರೊ ಶ್ರೀಪತಿ ತಂತ್ರಿ ಉಡುಪಿ ಉಪಸ್ಥಿತರಿದ್ದರು. ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ಸಂಚಾಲಕರಾದ ಶ್ರೀ ಪ್ರಸನ್ನ ಆಚಾರ್ಯರ ಸಂಗಟನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಡಾ. ಬಿ. ಗೋಪಾಲಾಚಾರ್ಯರು ನಿರ್ವಹಿಸಿದರು. 

ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕಾಗಿ ನಿಟ್ಟೆ ವಿಶ್ವವಿದ್ಯಾಲಯದ IKS ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಕೆ ( 99459 12075)ಅವರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ 

Previous Post

ಮಂಗಳೂರು :ಮೀನುಸಾಗಾಟದ ಪಿಕಪ್ ವಾಹನ ಪಲ್ಟಿಯಾಗಿ ಅಪಘಾತ – ಮೂವರಿಗೆ ಗಾಯ..!!

Next Post

ಮೊಂಥಾ’ ಚಂಡಮಾರುತ  : ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೊಂಥಾ’ ಚಂಡಮಾರುತ  : ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ!!

ಮೊಂಥಾ' ಚಂಡಮಾರುತ  : ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News