ಉಡುಪಿ : ಅಕ್ಟೋಬರ್ 30: ಪೋಡವಿಗೋಡೆಯ ಉಡುಪಿ ಶ್ರೀ ಕೃಷ್ಣನ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ
ನವಂಬರ್ 28 ರಂದು ನಡೆಯುವ ಲಕ್ಷ ಕಂಠ ಗೀತಾ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಲಿದ್ದಾರೆ.
ಬಳಿಕ ಶ್ರೀ ಮಠ ಆಯೋಜಿಸುತ್ತಿರುವ ಲಕ್ಷ ಕಂಠ ಗಿತಾ ಪಾರಾಯಣದ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
8 ವರ್ಷಗಳ ಹಿಂದೊಮ್ಮೆ ಅವರು ಉಡುಪಿಗೆ ಭೇಟಿ ನೀಡಿದ್ದರು.








