Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!

ಶಾಸಕರ ನಿರ್ಲಕ್ಷದ ಫಲವಾಗಿ ವಿದ್ಯಾರ್ಥಿಗಳು ಬೀದಿಗೆ ಬಂದಿದ್ದಾರೆ: ಶುಭದ್ ರಾವ್

Dhrishya News by Dhrishya News
30/10/2025
in ಸುದ್ದಿಗಳು
0
ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!
0
SHARES
18
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 30:ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾರಂಭಗೊಂಡ ನರ್ಸಿಂಗ್ ಕಾಲೇಜಿನ ಅವ್ಯವಸ್ಥೆಗೆ ಕಾಲೇಜಿನ ವಿದ್ಯಾರ್ಥಿಗಳು ಇಂದು ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿರುವುದಕ್ಕೆ ಶಾಸಕ ಸುನಿಲ್ ಕುಮಾರ್ ಅವರೇ ನೇರ ಹೊಣೆಯಾಗಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹೇಳಿದ್ದಾರೆ. 

ಸುನಿಲ್ ಕುಮಾರ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಚಾರದ ಹುಚ್ಚಿನಿಂದ ಯಾವುದೇ ಅನುದಾನವನ್ನು ಮೀಸಲಿಡದೆಯೆ ಕೇವಲ ಕಾಟಾಚಾರಕ್ಕೆ ನರ್ಸಿಂಗ್ ಕಾಲೇಜನ್ನು ಉದ್ಘಾಟನೆ ಮಾಡಿದ ಫಲವಾಗಿ ಇವತ್ತು ಕಾಲೇಜಿನಲ್ಲಿ ಅವ್ಯವಸ್ಥೆ ತಲೆದೋರಿದ್ದು ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ತೊಂದರೆ ಅನುಭವಿಸಿ ಪ್ರತಿಭಟನೆ ನಡೆಸುವಂತಾಗಿದೆ.

ಕಾರ್ಕಳ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಸಮಸ್ಯೆ, ಕಟ್ಟಡದ ಸಮಸ್ಯೆ, ಪೀಠೋಪಕರಣಗಳ ಸಮಸ್ಯೆ, ವೈಜ್ಞಾನಿಕ ಉಪಕರಣಗಳ ಸಮಸ್ಯೆ ಇದ್ದರೂ ಕೂಡ ಕೇವಲ ಚುನಾವಣೆಯ ದೃಷ್ಟಿಯಿಂದ ತರಾತುರಿಯಲ್ಲಿ ಉದ್ಘಾಟನೆ ಮಾಡಿ ಸುನಿಲ್ ಕುಮಾರ್ ಅವರು ನರ್ಸಿಂಗ್ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ವಿದ್ಯಾರ್ಥಿ ಜೀವನದ ಅದ್ಯಯನದ ಅಮೂಲ್ಯ ಸಮಯದಲ್ಲಿ ತಮ್ಮ ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಚೆಲ್ಲಾಟವಾಡಿರುವುದಕ್ಕೆ ಶಾಸಕ ಸುನಿಲ್ ಕುಮಾರ್ ಅವರು ವಿದ್ಯಾರ್ಥಿಗಳ ಕ್ಷಮೆಯನ್ನು ಯಾಚಿಸಬೇಕು. 

ಚುನಾವಣೆಯ ನಂತರವಾದರೂ ಶಾಸಕರು ಈ ಕುರಿತು ಜವಾಬ್ದಾರಿ ವಹಿಸಿ ನರ್ಸಿಂಗ್ ಕಾಲೇಜಿನ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕಿತ್ತು, ತನ್ನ ಜವಾಬ್ದಾರಿಯನ್ನು ಮರೆತ ಸುನೀಲ್ ಕುಮಾರ್ ಕೇವಲ ರಾಜಕೀಯ ಹೇಳಿಕೆಗಳನ್ನು ನೀಡುತ್ತಾ ವ್ಯರ್ಥ ಕಾಲಹರಣ ಮಾಡಿದ್ದಾರೆ, ಈಗ ತನ್ನ ತಪ್ಪನ್ನು ಮುಚ್ಚಿಟ್ಟುಕೊಳ್ಳಲು ಬಿಜೆಪಿಯ ವಿದ್ಯಾರ್ಥಿ ಘಟಕದ ಮೂಲಕ ನರ್ಸಿಂಗ್ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಿ ಪ್ರತಿಭಟನೆ ಮಾಡಿಸಿದ್ದಾರೆ. 

ತನ್ನ ರಾಜಕೀಯಕ್ಕಾಗಿ ವಿದ್ಯೆ ಕಲಿಯುವ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡುವುದನ್ನು ಬಿಟ್ಟು ಮಾನ್ಯ ಮುಖ್ಯಮಂತ್ರಿಯವರನ್ನು, ಮಾನ್ಯ ಆರೋಗ್ಯ ಸಚಿವರ ಬೆನ್ನು ಬಿದ್ದು ಕಾರ್ಕಳ ನರ್ಸಿಂಗ್ ಕಾಲೇಜಿಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಳ್ಳುವುಲ್ಲಿ ಶಾಸಕ ಸುನೀಲ್ ಕುಮಾರ್ ಮುಂದಾಗಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ತಮ್ಮ ಹೇಳಿಕೆಯಲ್ಲಿ ‌ತಿಳಿಸಿದ್ದಾರೆ.

ವರದಿ ಅರುಣ್ ಭಟ್ ಕಾರ್ಕಳ 

Previous Post

ಆರ್ ಎಸ್ ಎಸ್ ಕುರಿತು ಶುಭದ ರಾವ್ ಟೀಕೆಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ..!!

Next Post

ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯಿಂದ ಕಂಬಳಗಳ ದಿನಾಂಕ ನಿಗದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯಿಂದ ಕಂಬಳಗಳ ದಿನಾಂಕ ನಿಗದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News