ಉಡುಪಿ:ನವೆಂಬರ್ 02:ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹಾಗೂ ಇತ್ತೀಚೆಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಗೊಂಡಿದ್ದ ಜನಸಾಮಾನ್ಯರಿಗೆ ಬಹಳ ಹತ್ತಿರವಾಗಿದ್ದ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ಶನಿವಾರ ತಡರಾತ್ರಿ ನಿಧನರಾದರು
ನ.1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅದಾಗಲೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.








