Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಕ್ಷಕಂಠ ಗೀತಾ-ಪ್ರಧಾನಿ ಭೇಟಿ ಪ್ರಥಮ ಪೂರ್ವಭಾವಿ ಸಭೆ..!!

Dhrishya News by Dhrishya News
03/11/2025
in ಸುದ್ದಿಗಳು
0
ಲಕ್ಷಕಂಠ ಗೀತಾ-ಪ್ರಧಾನಿ ಭೇಟಿ ಪ್ರಥಮ ಪೂರ್ವಭಾವಿ ಸಭೆ..!!
0
SHARES
60
VIEWS
Share on FacebookShare on Twitter

ಉಡುಪಿ:ನವೆಂಬರ್ 03:ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತಾ ಆಯೋಜನೆ ಹಾಗೂ ಪ್ರಧಾನಮಂತ್ರಿಯವರ ಭೇಟಿಯ ಪೂರ್ವತಯಾರಿಗಳ ಬಗ್ಗೆ ಉಡುಪಿ ಶ್ರೀಕೃಷ್ಣಮಠ ಸಮೀಪದ ಗೀತಾ ಮಂದಿರದಲ್ಲಿ ಇಂದು ಪರ್ಯಾಯ ಶ್ರೀಪಾದರಾದ ಪರಮಪೂಜ್ಯ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಗಳ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸ್ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡ ಪೂರ್ವಭಾವಿ ಸಭೆ ನಡೆಯಿತು.  

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪರ್ಯಾಯ ಶ್ರೀಶ್ರೀಗಳು , ತಮ್ಮ ಕಳೆದ ಪರ್ಯಾಯದಲ್ಲಿ ಗುಜರಾತಿನ ಮುಖ್ಯಮಂತ್ರಿಗಳಾಗಿ ಆಗಮಿಸಿದ್ದ ಶ್ರೀ ನರೇಂದ್ರ ಮೋದಿಯವರು ಈ ಬಾರಿ ಪುನಃ ನಮ್ಮ ಪರ್ಯಾಯದಲ್ಲಿಯೇ ಪ್ರಧಾನಮಂತ್ರಿಗಳಾಗಿ ಆಗಮಿಸುತ್ತಿದ್ದು, ಉಡುಪಿಯ ಸಭ್ಯತೆ, ಸಂಸ್ಕೃತಿ, ಆತಿಥ್ಯಗಳ ವಿಶೇಷತೆಗಳು ಸರ್ವರಿಗೂ ತಿಳಿಯುವಂತೆ ಕಾರ್ಯಕ್ರಮ ಆಯೋಜನೆಯಾಗಬೇಕಿದ್ದು, ಮಾನ್ಯ ಪ್ರಧಾನಮಂತ್ರಿಗಳ ಸುರಕ್ಷತೆಗೂ ಸಂಪೂರ್ಣ ಆದ್ಯತೆ ನೀಡಬೇಕಿದೆ. 1 ತಿಂಗಳ ಪರ್ಯಂತವಾಗಿ ನಡೆಯುವ ಗೀತೋತ್ಸವದಲ್ಲಿ ಸಂತ ಸಂಗಮ, ಗೀತಾ ಮಹಾಯಾಗ, ಅಂತಾರಾಷ್ಟ್ರೀಯ ಗೀತಾ ಸಮ್ಮೇಳನ ಇತ್ಯಾದಿ ನಡೆಯಲಿದ್ದು, ಈ ಕಾರ್ಯಕ್ರಮಗಳಿಗಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀಯೋಗಿ ಆದಿತ್ಯನಾಥ, ಅಮೇರಿಕ ಸೇರಿದಂತೆ ವಿಶ್ವದ ಹಲವು ಗಣ್ಯರು , ಹಾಗೂ ಹಲವು ಕೇಂದ್ರ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ .

ಇದು ಸಮಗ್ರ ಉಡುಪಿಗೆ ಗೌರವ ತರುವ ಐತಿಹಾಸಿಕ ಕಾರ್ಯಕ್ರಮವಾಗಲಿದ್ದು ಎಲ್ಲ ಜನರೂ ಇದರ ಯಶಸ್ಸಿಗೆ ಕೈಜೋಡಿಸಬೇಕು ಎಂದರು.

ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳ ಎಲ್ಲ ಕಾರ್ಯಕ್ರಮಗಳು ವಿಶೇಷವಾಗಿದ್ದು, ಶ್ರೀಗಳ ಕಳೆದ ಪರ್ಯಾಯದಲ್ಲಿಯೂ ಉಡುಪಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದು, ಪ್ರಸಕ್ತ ಉಡುಪಿಗೆ ಪ್ರಧಾನಮಂತ್ರಿಗಳ ಭೇಟಿಯೊಂದಿಗೆ ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಬಲ ಸಿಕ್ಕಂತಾಗುವುದು, ಇದಕ್ಕಾಗಿ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಸಹಕರಿಸಬೇಕೆಂದು ಕೋರಿದರು.

ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪಾ ಟಿ.ಕೆ, ಕಾಪು ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಶ್ರೀ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಶ್ರೀ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಸಹಕರಿಸುವ ಭರವಸೆ ನೀಡಿದರು.. ಜಿಲ್ಲಾ ಪೋಲೀಸ್ ಅಧೀಕ್ಷಕ ಶ್ರೀ ಹರಿರಾಮ್ ಶಂಕರ್ ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕಂದಾಯ ಉಪ ಆಯುಕ್ತರಾದ ಶ್ರೀಮತಿ ರಶ್ಮಿ, ತಹಶೀಲ್ದಾರರಾದ ಶ್ರೀ ಗುರುರಾಜ್ ಮೊದಲಾದವರು ಭಾಗವಹಿಸಿದ್ದರು.

ದಿವಾನರಾದ ಶ್ರೀ ನಾಗರಾಜ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು, ಸಾಗರೋತ್ತರ ಕಾರ್ಯದರ್ಶಿ ಶ್ರೀ ಪ್ರಸನ್ನ ಆಚಾರ್ಯ ವಂದಿಸಿದರು, ಶ್ರೀಮಠದ ಪ್ರಮುಖರಾದ ಸಂತೋಷ್ ಶೆಟ್ಟಿ ತೆಂಕರಗುತ್ತು, ರತೀಶ್ ತಂತ್ರಿ ,ಪ್ರಮೋದ್ ಸಾಗರ್, ಯೋಗೀಂದ್ರ ಭಟ್ , ರವೀಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವದ ಅಸ್ವಸ್ಥತೆಗಳ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(ಸಿಎಂಇ )ಕಾರ್ಯಕ್ರಮ..!!

Next Post

ಉಡುಪಿ :ರಥಬೀದಿಯಲ್ಲಿ ಹಣತೆ ಇಡುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ರಥಬೀದಿಯಲ್ಲಿ ಹಣತೆ ಇಡುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ..!!

ಉಡುಪಿ :ರಥಬೀದಿಯಲ್ಲಿ ಹಣತೆ ಇಡುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check