ಕುಂದಾಪುರ :ನವೆಂಬರ್ 05:ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ಒಂದನ್ನು ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೇವಸ್ಥಾನದ ಅಧಿಕೃತ ವೆಬ್ಸೈಟ್ http://karnatakatemplesaccommodation.com ಇದರ ಬದಲಿಗೆ ವೆಬ್ಸೈಟನ್ನು ತೆರೆದು, ನಕಲಿ ವೆಬ್ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ.
ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ. ಅದರಂತೆ ಕೊಲ್ಲೂರು ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 53/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.








