Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇನ್ಮುಂದೆ ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ಗುರುತಿನ ಚೀಟಿ ಕಡ್ಡಾಯ : ನಗರಸಭೆ ಸೂಚನೆ.!!

Dhrishya News by Dhrishya News
05/11/2025
in ಕರಾವಳಿ
0
0
SHARES
35
VIEWS
Share on FacebookShare on Twitter

ಉಡುಪಿ :ನವೆಂಬರ್ 05: ಬೀದಿ ನಾಯಿಗಳಿಗೆ ಸಂಬಂಧಿಸಿ ಹಲವು ಸಮಸ್ಯೆಗಳಿಗೆ ಉಡುಪಿ ನಗರಸಭೆ ಪ್ರಮುಖ ಸೂಚನೆಗಳನ್ನು ನೀಡಿದೆ. 

ಬೀದಿ ನಾಯಿಗಳಿಗೆ ಕಂಡಕಂಡಲ್ಲಿ ಆಹಾರ ಹಾಕುವಂತಿಲ್ಲ, ಆಹಾರ ಹಾಕುವವರಿಗೆ ಗುರುತಿನ ಚೀಟಿ ಇರಬೇಕು, ನಾಯಿ ಮರಿಗಳನ್ನು ತಂದು ರಸ್ತೆಯಲ್ಲಿ ಬಿಡುವಂತಿಲ್ಲ ಎಂಬುದು ಇವುಗಳಲ್ಲಿ ಪ್ರಮುಖವಾಗಿವೆ.

ಇದರ ಪ್ರಕಾರ, ಮುಂದೆ ಬೀದಿ ನಾಯಿಗಳಿಗೆ ಆಹಾರ ಹಾಕಲು ಕೆಲವು ಜಾಗಗಳನ್ನು ನಿಗದಿ ಮಾಡಲಾಗಿದೆ. ಅದನ್ನು ಬಿಟ್ಟು ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ, ಶಾಲಾ ವಠಾರ, ಜನ ನಿಬಿಡ ಪ್ರದೇಶ, ಬಸ್‌ ನಿಲ್ದಾಣ ಸೇರಿದಂತೆ ಇತರ ಸ್ಥಳಗಳಲ್ಲಿ ಸಾರ್ವಜನಿಕರು ಆಹಾರ ಹಾಕಬಾರದು ಎಂದು ನಗರಸಭೆ ತಿಳಿಸಿದೆ.

ನಗರಸಭೆಯಿಂದ ಪ್ರಾಥಮಿಕ ಹಂತದಲ್ಲಿ ಬೀಡಿನ ಗುಡ್ಡೆ ಹಿಂದೂ ರುದ್ರ ಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿ ಹಿಂದೂ ರುದ್ರ ಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು ಕೊಳಚೆ ನೀರು ಶುದ್ದೀಕರಣ ಘಟಕದ ಎದುರುಗಡೆ, ಪೆರಂಪಳ್ಳಿ ಮುಖ್ಯ ರಸ್ತೆಯ ಭಾರತೀಯ ವಿಕಾಸ ಟ್ರಸ್ಟ್‌ ಕೆಳಗಡೆ, ‘ರಾಜ್‌ ಫಿಶ್‌ ಮಿಲ್‌ ಹತ್ತಿರ, ಆದಿ ಉಡುಪಿ, ಮಲ್ಪೆ ರಸ್ತೆಯ ಹೆಲಿಪ್ಯಾಡ್‌ ಹತ್ತಿರ, ಕಕ್ಕುಂಜೆ ನಾರಾಯಣ ನಗರ ಹೋಗುವ ರಸ್ತೆಯ ತಿರುವು ಬಳಿ ಹಾಗೂ ಬೈಲೂರು ಹನುಮಾನ್‌ ಗ್ಯಾರೇಜ್‌ ಡಯಾನ ರಸ್ತೆ ವಿಜಯ ವೀರ ಸಂಘದ ಹತ್ತಿರ ನಿಯಮಾನುಸಾರ ಷರತ್ತು ವಿಧಿಸಿ ಬೀದಿ ನಾಯಿಗಳಿಗೆ ಆಹಾರ ಹಾಕಲು ನೀಡಲು ಸ್ಥಳ ಗುರುತಿಸಲಾಗಿದೆ.

ಇದರೊಂದಿಗೆ ಇತರೆ ಯಾವುದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಲು ಸಾರ್ವಜನಿಕರು ಮುಂದೆ ಬಂದಲ್ಲಿ ನಗರಸಭೆ ಕಚೇರಿಗೆ ಲಿಖೀತ ಮನವಿ ಸಲ್ಲಿಸಿದರೆ ಪರಿಶೀಲಿಸಿ ಅನುಮತಿ ನೀಡಲು ಕ್ರಮವಹಿಸಲಾಗುವುದು.

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ಅನುಮತಿ ಹಾಗೂ ಗುರುತು ಚೀಟಿ ಕಡ್ಡಾಯ.

ಆಹಾರ ಹಾಕುವವರು ನಗರಸಭೆಯ ಕಚೇರಿಯಿಂದ ಲಿಖೀತವಾಗಿ ಅರ್ಜಿ ನೀಡಿ ನಿಯಮಾನುಸಾರ ಅನುಮತಿ ಪಡೆದುಕೊಳ್ಳಬೇಕು.

ಬೀದಿ ನಾಯಿಗಳಿಗೆ ಆಹಾರ ಹಾಕುವವರೇ ನಾಯಿಗಳಿಗೆ ರೇಬಿಸ್‌ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು.

ಮನೆಗಳಲ್ಲಿ ನಾಯಿ ಸಾಕುವವರು ನಾಯಿಗಳ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರು ಮನೆಗಳಲ್ಲಿ ಸಾಕುವ ನಾಯಿಗಳಿಗೆ ರೇಬಿಸ್‌ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಜತೆಗೆ ಸಾಕು ನಾಯಿಗಳಿಗೆ ಬೆಲ್ಟ್ ಅಳವಡಿಸಬೇಕು.

ಯಾವುದೇ ಸಾಕು ನಾಯಿಗಳನ್ನು ಹಾಗೂ ಅದರ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಟ್ಟಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಕೊಲ್ಲೂರು  ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ – ದೂರು ದಾಖಲು..!!

Next Post

ನಂದಿನಿ ತುಪ್ಪ ಬೆಲೆ ದಿಢೀರ್ ಹೆಚ್ಚಳ; ಇಂದಿನಿಂದಲೇ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂದಿನಿ ತುಪ್ಪ ಬೆಲೆ ದಿಢೀರ್ ಹೆಚ್ಚಳ; ಇಂದಿನಿಂದಲೇ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check