ಉಡುಪಿ : ನವೆಂಬರ್ 06: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ 5 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಪೇಂಟಿಂಗ್ ವಿಭಾಗದಲ್ಲಿ ಒಂದು ಡೆಪ್ಯೂಟಿ ಮ್ಯಾನೇಜರ್, ಎಲೆಕ್ಟ್ರಿಕಲ್ ಡಿಸೈನರ್ ವಿಭಾಗದಲ್ಲಿ 3 ಡೆಪ್ಯೂಟಿ ಮ್ಯಾನೇಜರ್ ಹಾಗೂ ಎಸ್ಟಿಮೇಷನ್ ವಿಭಾಗದಲ್ಲಿ ಒಂದು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ.
ಉಳಿದ ಅಭ್ಯರ್ಥಿಗಳಿಗೆ ಒಂದು ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಕೆಲಸದ ಅನುಭವ, ಪವರ್ ಪಾಯಿಂಟ್ ಪ್ರೆಸೆಂಟೇಷನ್ ಪರಿಣತಿ, ಗ್ರೂಪ್ ಡಿಸ್ಕಷನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು udupicsl.com ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿದೆ.








