Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೃಹತ್ ಗೀತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News by Dhrishya News
06/11/2025
in ಮುಖಪುಟ, ಸುದ್ದಿಗಳು
0
ಬೃಹತ್ ಗೀತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!!
0
SHARES
17
VIEWS
Share on FacebookShare on Twitter

ಉಡುಪಿ: ನವೆಂಬರ್ 06:ಪೂಜ್ಯ ಶ್ರೀ ಪುತ್ತಿಗೆ ಶ್ರೀಪಾದರ ವಿಶ್ವ ಗೀತಾ ಪರ್ಯಾಯ ಎಂದೇ ಖ್ಯಾತವಾದ ಚತುರ್ಥ ಪರ್ಯಾಯದ ಬೃಹತ್ ಗೀತೋತ್ಸವ ಕಾರ್ಯಕ್ರಮ ನವೆಂಬರ್ 8ರಿಂದ ಒಂದು ತಿಂಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಅಲ್ಲದೆ ಅನೇಕ ಸಂತರು ಈ ಉತ್ಸವದಲ್ಲಿ ಪಾಲ್ಗ್ಗೊಂಡು ಗೀತಾ ಸಂದೇಶ ನೀಡಲಿದ್ದಾರೆ. ವೈವಿಧ್ಯಮಯವಾಗಿ ಸರ್ವ ಜನರ ಸಮಾಗಮದೊಂದಿಗೆ ನಡೆಯಲಿರುವ ಈ ಉತ್ಸವದ ರೂಪುರೇಷೆ ಕುರಿತಂತೆ ಅನೇಕ ಸಂಘ ಸಂಸ್ಠೆಗಳ ಪ್ರಮುಖರ ಸಭೆಗಳು ಈಗಾಗಲೇ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿದ್ದು ಬುಧವಾರ ಸಂಘ ಪರಿವಾರದ ಸದಸ್ಯರನ್ನು ಒಳಗೊಂಡ ಪೂರ್ವಭಾವಿ ಸಭೆ ಕನಕ ಮಂಟಪದಲ್ಲಿ ಶ್ರೀ ಪುತ್ತಿಗೆ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ಮಾತನಾಡಿ ಗೀತಾಚಾರ್ಯ ಶ್ರೀಕೃಷ್ಣನ ಉಡುಪಿಯಲ್ಲಿ ಭಗವದ್ಗೀತೆಯ ಸಂದೇಶವನ್ನು ಸಾಕಷ್ಟು ವಿಸ್ತೃತವಾಗಿ ನಾವು ಮಾಡುತ್ತಿದ್ದು ಲಕ್ಷಾಂತರ ಮಂದಿ ಈಗಾಗಲೇ ಕೋಟಿ ಗೀತಾ ಲೇಖನಯಜ್ಞದಲ್ಲಿ ಭಾಗವಹಿಸಿದ್ದು ನಮಗೆ ಅತೀವ ಸಂತಸ ತಂದಿದೆ.

ಆ ಪ್ರಯುಕ್ತ ನಡೆಯಲಿರುವ ಈ ಬೃಹತ್ ಗೀತೋತ್ಸವದಲ್ಲಿ ಭಗವದ್ಗೀತೆಯ ತತ್ತ್ವವನ್ನೇ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರಧಾನ ಮಂತ್ರಿ‌ ಮೋದಿ ಭಾಗವಹಿಸುತ್ತಿರುವುದು ನಿಜಕ್ಕೂ ಶ್ರೀಕೃಷ್ಣನ ಸಂಕಲ್ಪವಾಗಿದೆ. ಈ ಕಾರ್ಯಕ್ರಮವನ್ನು ಉಡುಪಿಯ ಸುತ್ತಮುತ್ತಲಿನ ಎಲ್ಲ ಜನರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಗೀತಾಚಾರ್ಯ ಶ್ರೀಕೃಷ್ಣ ಮುಖ್ಯಪ್ರಾಣರ ಕೃಪೆಗೆ ಪಾತ್ರರಾಗಬೇಕೆಂದು ಆಶಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀಪಾದರು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ ಶೆಟ್ಟಿ, ಬಿಜೆಪಿ ಜಿಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಹಕಾರ್ಯವಾಹ ವಾದಿರಾಜದ, ಮಾಜಿ ಶಾಸಕ ಲಾಲಾಜಿ ಮೆಂಡನ್, ಕಾರ್ಯಕ್ರಮ ಸಂಚಸಲಕ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದವರಿದ್ದರು.

ಪುತ್ತಿಗೆ ಮಠ ದಿವಾನರಾದ ನಾಗರಾಜ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮದ ವಿವರ ನೀಡಿದರು. ಕಾರ್ಯದರ್ಶಿ ಪ್ರಸನ್ನಾಚಾರ್ಯ ವಂದಿಸಿದರು.

Previous Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಗಾಗಿ ಅರ್ಜಿ ಅಹ್ವಾನ..!!

Next Post

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ನಿಧನ :ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ನಿಧನ :ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ..!!

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ನಿಧನ :ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News