ಉಡುಪಿ : ನವೆಂಬರ್ 07:ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ.
ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು 2026ರ ಮಾರ್ಚ್ 18ರಂದು ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯುಲಿವೆ.
2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ.








