ಉಡುಪಿ:ನವೆಂಬರ್ 07:ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಕರಕಲಾದ ಘಟನೆ ಗುರುವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.
ದ್ವಿಚಕ್ರ ವಾಹನದ ವಾರಸುದಾರರು ಪತ್ತೆಯಾಗಿಲ್ಲ. ಮಲ್ಪೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.