ಬೆಂಗಳೂರು: ನವೆಂಬರ್ 08 : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದಕ್ಕೂ ಮೊದಲು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎಲ್ಲಾ ಆರೋಪಿಗಳ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ನೀಡಿತ್ತು. ಬಳಿಕ ಪವಿತ್ರ ಗೌಡ ಮತ್ತೊಮ್ಮೆ ಅರ್ಜಿ ಪರಿಶೀಲನೆ ನಡೆಸಿ ಜಾಮೀನು ಕೋರಿ ಇತ್ತೀಚಿಗೆ ಅರ್ಜಿ ಸಲ್ಲಿಸಿದ್ದರು.
ಇಂದು ಸುಪ್ರೀಂ ಕೋರ್ಟ್ ಪವಿತ್ರ ಗೌಡ ಅರ್ಜಿಯನ್ನು ಸಹ ವಜಾ ಗೊಳಿಸಿದೆ.








