Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

Dhrishya News by Dhrishya News
11/11/2025
in ಮುಖಪುಟ
0
0
SHARES
15
VIEWS
Share on FacebookShare on Twitter

ಬೆಂಗಳೂರು:ನವೆಂಬರ್ 08:ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು

ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Previous Post

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

Next Post

ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved