ಬೆಂಗಳೂರು: ನವೆಂಬರ್ 11 : ರಾಜ್ಯ ಸರ್ಕಾರವು ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2025ರ ಡಿಸೆಂಬರ್ 3ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಒಲಿಂಪಿಕ್ಸ್ ನಲ್ಲಿರುವ ಅಧಿಕೃತ ಕ್ರೀಡೆಗಳಲ್ಲಿ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಉನ್ನತ ಸಾಧನೆ ದಾಖಲಿಸಿರುವ ರಾಜ್ಯದ 60 ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ, ಪ್ರತಿವರ್ಷ ತಲಾ ₹10.00 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.








