ಉಡುಪಿ: ನವೆಂಬರ್ 15:ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು
ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಬಿಜೆಪಿ ಹಾಗೂ ಪ್ರಧಾನಿ ಮೋದಿ ಪರ ಘೋಷಣೆ ಕೂಗಿ, ಜೈಕಾರ ಮೊಳಗಿಸಿದರು.
ಕಾಂಗ್ರೆಸ್ಸಿನ ನಿರಂತರ ಅಪಪ್ರಚಾರದ ನಡುವೆಯೂ ಬಿಹಾರದ ವಿಧಾನಸಭೆಗೆ ನಡೆದ ಚುನಾವಣಾ ಫಲಿತಾಂಶ ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದೆ, ನಿರೀಕ್ಷೆಯoತೆಯೇ ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಅಭೂತಪೂರ್ವ ಫಲಿತಾಂಶಕ್ಕೆ ಇಡೀ ದೇಶವೇ ತಲೆಬಾಗಿದೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದೆ. ಕಾಂಗ್ರೆಸ್ಸಿನ ಷಡ್ಯಂತ್ರದ ಭಾಗವಾದ ವೋಟ್ ಚೋರ್ ಅಭಿಯಾನಕ್ಕೂ ಕಿಂಚಿತ್ತೂ ಬೆಲೆ ಕೊಡದೇ ಬಿಹಾರದ ಮತದಾರರು ಎನ್‌ಡಿಎ ಅಭ್ಯರ್ಥಿಗಳನ್ನು ಭರ್ಜರಿ ಮತಗಳಿಂದ ಗೆಲ್ಲಿಸಿರುವುದು ಸಂತಸ ತಂದಿದೆ. ಕಾಂಗ್ರೆಸ್ಸಿನ ಸುಳ್ಳು, ಅಪ್ರಚಾರಗಳೆಲ್ಲವೂ ಅಂತ್ಯ ಕಂಡಿದೆ. ಈ ಜನಾದೇಶದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನಾದರೂ ಬುದ್ಧಿವಂತ ರಾಜಕಾರಿಣಿ ಆಗಬೇಕಾದ ಅಗತ್ಯವಿದೆ ಎಂದು ಕುತ್ಯಾರು ತಿಳಿಸಿದರು.
ಎನ್‌ಡಿಎ ಒಕ್ಕೂಟದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮಾಧ್ಯಮದಲ್ಲಿ ಫಲಿತಾಂಶವನ್ನು ವೀಕ್ಷಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮುಖಂಡರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸತ್ಯಾನಂದ ನಾಯಕ್, ಪ್ರಭಾಕರ ಪೂಜಾರಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್, ದಿನೇಶ್ ಅಮೀನ್, ರತ್ನಾಕರ ಇಂದ್ರಾಳಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಂಧ್ಯಾ ರಮೇಶ್, ಸುಜಾಲಾ ಸತೀಶ್, ವಿದ್ಯಾ ಶ್ಯಾಮಸುಂದರ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ್ ಆಚಾರ್ಯ, ದೇವಾನಂದ ನಾಯ್ಕ್, ಶ್ರೀವತ್ಸ, ಅರ್ಜುನ್ ಪ್ರಭು, ಲೋಕಯ್ಯ ಇಂದ್ರಾಳಿ, ಸುಗುಣಾ ನಾಯ್ಕ್, ಪ್ರಜ್ಞಾ ಶೆಟ್ಟಿ, ಕವಿತಾ, ಸಲೀಂ ಅಂಬಾಗಿಲು, ಜಯಕರ್, ಕಿಶೋರ್ ಕರಂಬಳ್ಳಿ, ಆನಂದ ಸುವರ್ಣ, ಸಂತೋಷ್ ಆಚಾರ್ಯ, ರತ್ನಾಕರ್ ದೇವಾಡಿಗ, ಪ್ರಥ್ವಿರಾಜ್, ಭೂಷಣ್ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.








