ಉಡುಪಿ: ನವೆಂಬರ್ 15: ಮಕ್ಕಳ ದಿನಾಚರಣೆಯ ಪ್ರಯುಕ್ತವಾಗಿ ಉದ್ಯಾವರ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಉದ್ಯಾವರ ಗ್ರಾಮ ಪಂಚಾಯತ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಿಯಾಜ್ ಪಳ್ಳಿ, ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ರವರ ಗುಣಗಾನ ಮಾಡಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಅಂಗನವಾಡಿಯಲ್ಲಿಯ ಎಲ್ಲಾ ಮಕ್ಕಳಿಗೆ ವಿವಿಧ ಗಿಫ್ಟ್ ಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ನಿರಂತರ್ ಉದ್ಯಾವರದ ಸ್ಥಾಪಕ ಅಧ್ಯಕ್ಷ ಸ್ಟೀವನ್ ಕುಲಾಸೊ, ಆಶಾ ಕಾರ್ಯಕರ್ತೆ ನಸೀಮ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಅಕ್ಷತಾ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.








