Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಮಾನಾಥ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿ..!!

Dhrishya News by Dhrishya News
16/05/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಪಕ್ಷದ ನಾಯಕ ರಮಾನಾಥ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪ್ರಕಟಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನನಗೀಗ 71 ವರ್ಷ.ಇಷ್ಟು ವರ್ಷ ಪಕ್ಷವು ನನಗೆ ಎಲ್ಲ ರೀತಿಯ ಅವಕಾಶಗಳನ್ನು ನೀಡಿದೆ. ನಾನು ಅಭ್ಯರ್ಥಿಯಾಗುವ ಬಗ್ಗೆ ಪಕ್ಷದಲ್ಲೇ ಭಿನ್ನಸ್ವರಗಳಿದ್ದವು. ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಇನ್ನು ಮುಂದೆಯೂ ಸಕ್ರಿಯವಾಗಿ ಭಾಗವಹಿಸುತ್ತೇನೆ’ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ರೈ, ‘ಇನ್ನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಾನು ನಿರ್ಧಾರ ತಳೆದಿದ್ದೇನೆ. ನನಗೆ ಪಕ್ಷ ಮುಖ್ಯ. ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಗಳಿಗೆ ಬದ್ಧವಾಗಿರುತ್ತೇನೆ’ ಎಂದರು.

‘ಈ ಬಾರಿಯ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಪಕ್ಷದ ಬಗ್ಗೆಯೇ ಒಲವು ವ್ಯಕ್ತಪಡಿಸಿದ್ದರು. ಈ ಬಾರಿ ಗೆಲ್ಲಬಹುದು ಎಂಬ ವಿಶ್ವಾಸವನ್ನು ಹೊಂದಿದ್ದೆ. ಆದರೂ ಎಲ್ಲೋ ಹಿನ್ನಡೆಯಾಗಿದೆ. ಸೋಲಿಗೆ ಕಾರಣ ಏನು ಎಂಬ ಬಗ್ಗೆ ಆತ್ಮಾವಲೊಕ ಮಾಡಿಕೊಳ್ಳುತ್ತೇನೆ. 2018ರ ವಿಧಾನ ಸಭಾ ಚುನಾವಣೆಗೆ ಹೋಲಿಸಿದರೆ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿನ ಅಂತರ 15,971ಮತಗಳಿಂದ 8,282ಕ್ಕೆ ಇಳಿಕೆಯಾಗಿದೆ’ ಎಂದರು.

ರಾಜ್ಯದಲ್ಲಿ ಪಕ್ಷದ ಸಾಧನೆಗೆ ಅಭಿನಂದನೆ ಸಲ್ಲಿಸಿದ ರೈ, ‘ಇಷ್ಟು ವರ್ಷವೂ ರಾಜ್ಯದಲ್ಲಿ ಬಿಜೆಪಿ ಒಮ್ಮೆಯೂ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಅವರು ಜೆಡಿಎಸ್‌ ಜೊತೆ ಸಮ್ಮಿಶ್ರ ಸರ್ಕಾರ ನಡೆಸಿದರು. ನಂತರ ಪಕ್ಷೇತರ ಶಾಸಕರ ಜೊತೆ ಸೇರಿ ಹಾಗೂ ಆಪರೇಷನ್‌ ಕಮಲದ ಮೂಲಕ‌ ಸರ್ಕಾರ ರಚಿಸಿದರು. ಮತದಾರರು ಯಾವತ್ತೂ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿಲ್ಲ. ಮುಂದೆಯೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಪಕ್ಷವೇ ಜಯಭೇರಿ ಬಾರಿಸಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಆಗಿರುವ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಮುಂಬರುವ ಚುನಾವಣೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಠಿಣ ಶ್ರಮ ಹಾಕಲಿದ್ದೇವೆ. ಹೇಗೂ ರಾಜ್ಯದಲ್ಲಿ ನಮ್ಮ ಪಕ್ಷದ್ದೇ ಸರ್ಕಾರ ರಚನೆಯಾಗಲಿದೆ’ ಎಂದರು.

ಪ್ರಮಾಣವಚನ ಸಮಾರಂಭ ಮುಗಿದ ತಕ್ಷಣವೇ ಕಾಂಗ್ರೆಸ್‌ ಪಕ್ಷದ ‘ಗ್ಯಾರಂಟೀ’ಗಳನ್ನು ಅನುಷ್ಠಾನಕ್ಕೆ ತರಲಾಗುವುದು’ ಎಂದು ತಿಳಿಸಿದರು.

ರಮಾನಾಥ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುರಿತು ಪ್ರತಿಕ್ರಿಯಿಸಿದ ಶಾಸಕ ಯು.ಟಿ.ಖಾದರ್‌, ‘ಅವರು ಹಿರಿಯ ನಾಯಕ. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಕ್ಕೆ ಪಕ್ಷವು ಅವಕಾಶ ನೀಡುವುದಿಲ್ಲ. ಇನ್ನು ಮುಂದೆಯೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದ್ದಾರೆ’ ಎಂದರು.

Previous Post

ಉಡುಪಿ: ನಗರದಲ್ಲಿ ನೀರಿನ ಅಭಾವ – ಮೇ 19 ರಿಂದ ರೇಷನಿಂಗ್..!!

Next Post

ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕರ್ಕಶ ಹಾರ್ನ್‌ ಹಾವಳಿ- ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕರ್ಕಶ ಹಾರ್ನ್‌ ಹಾವಳಿ- ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News