ಉಡುಪಿ: ನವೆಂಬರ್ 16:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ವಿಶ್ವಗೀತಾ ಪರ್ಯಾಯ ಮಹೋತ್ಸವದ ಬೃಹತ್ ಗೀತೋತ್ಸವದ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ವಿಶ್ವಗೀತಾ ಪರ್ಯಾಯ ಮಹೋತ್ಸವದ ಬೃಹತ್ ಗೀತೋತ್ಸವದ ಪ್ರಯುಕ್ತ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು, ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭು ಪೀಠ, ಅರೆಮಾದನಹಳ್ಳಿ ಅವರು ಸಂತ ಸಂದೇಶ ನೀಡಿ, ಶ್ರೀಕೃಷ್ಣನ ಅನುಗ್ರಹದಿಂದ ಸಂಕಷ್ಟ ದೂರವಾಗುತ್ತದೆ. ಭಗವಂತನ ನಿರಂತರ ನಾಮಸ್ಮರಣೆ, ಗೀತೆಯ ಅಧ್ಯಾಯ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಪರ್ಯಾಯ ಪುತ್ತಿಗೆ ಶ್ರೀಗಳು ಗೀತೆಯ ಪ್ರಚಾರವನ್ನು ನಡೆಸುತ್ತಿದ್ದು, ಕೋಟಿ ಕೋಟಿ ಜನರಲ್ಲಿ ಗೀತೆಯ ಮಹತ್ವವನ್ನು ಬಿತ್ತರಿಸಿದ್ದಾರೆ. ಇದು ಪುಣ್ಯದ ಕೆಲಸ ಎಂದರು.
ಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಶ್ರೀಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಿಶ್ವಕರ್ಮ ಸಹಕಾರಿ ಸಂಘದ ಅಧ್ಯಕ್ಷ ಡಾ | ಹರೀಶ್ ಆಚಾರ್ಯ ಉಪಸ್ಥಿತರಿದ್ದರು.








