ಉಡುಪಿ : ನವೆಂಬರ್ 17:ರಾಜ್ಯ ಉಚ್ಛನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್‌ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದರೆ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಜೊತೆಗೆ ಆ ದೋಣಿಯ ಡೀಸೆಲ್ ಸರಬರಾಜನ್ನು ತಡೆಹಿಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹಾಗೆಯೇ ಇಂತಹ ಪ್ರಕರಣಗಳು ಪುನರಾವರ್ತಿಸಿದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿಯನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲೆಯ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.








