Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂಘಟನೆಗೆ ಯಾವ ರೀತಿಯಲ್ಲಿ ಶಕ್ತಿ ತುಂಬಬಹುದು ಎನ್ನುವುದಕ್ಕೆ ಉಡುಪಿ ಹಾಗೂ ದ. ಕ. ಜಿಲ್ಲೆ ಮಾದರಿ.:ಬಿ.ಎವೈ. ವಿಜಯೇಂದ್ರ..!!

Dhrishya News by Dhrishya News
19/11/2025
in ಸುದ್ದಿಗಳು
0
ಸಂಘಟನೆಗೆ ಯಾವ ರೀತಿಯಲ್ಲಿ ಶಕ್ತಿ ತುಂಬಬಹುದು ಎನ್ನುವುದಕ್ಕೆ ಉಡುಪಿ ಹಾಗೂ ದ. ಕ. ಜಿಲ್ಲೆ ಮಾದರಿ.:ಬಿ.ಎವೈ. ವಿಜಯೇಂದ್ರ..!!
0
SHARES
59
VIEWS
Share on FacebookShare on Twitter

ಕಾರ್ಕಳ :ನವೆಂಬರ್ 19 :ಸಂಘಟನೆಗೆ ಯಾವ ರೀತಿಯಲ್ಲಿ ಶಕ್ತಿ ತುಂಬಬಹುದು ಎನ್ನುವುದಕ್ಕೆ ಉಡುಪಿ ಹಾಗೂ ದ. ಕ. ಜಿಲ್ಲೆ ಮಾದರಿ. ಯಡಿಯೂರಪ್ಪ ಅವರು ಅವಿಭಜಿತ ಜಿಲ್ಲೆಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎವೈ. ವಿಜಯೇಂದ್ರ ಹೇಳಿದರು. ಅವರು ನ. 18ರ ಸಂಜೆ ಕಾರ್ಕಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಬಿಜೆಪಿ ಮಂಡಲ ವತಿಯಿಂದ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಾರ್ಕಳಕ್ಕೆ ಭೇಟಿ ನೀಡಿದ್ದೇನೆ. ಕರಾವಳಿಯಲ್ಲಿ ಸಂಘಟನೆ ಸದೃಢವಾಗಿದೆ ಎಂದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ ಎಂಬ ಭಾವನೆ ಜನರಲ್ಲಿಲ್ಲ. ಕಾಂಗ್ರೆಸ್ ಪಕ್ಷದ ಪೊಳ್ಳು ಭರವಸೆ ನಂಬಿ ಮೋಸ ಹೋದೆವು ಎಂಬ ಭಾವನೆ ರಾಜ್ಯದ ಜನತೆಯಲ್ಲಿದೆ ಎಂದರು.

ಜಾತಿ ನಡುವೆ ಒಡಕು ಮೂಡಿಸುವ ಕಾರ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜಾತಿಯ ನಡುವೆ ಒಡಕು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆಯೇ ಹೊರತು ರಾಜ್ಯದ ಅಭಿವೃದ್ಧಿ ಬಗ್ಗೆಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ಒಮ್ಮತವಿದೆ

ಬಿಜೆಪಿಯಲ್ಲಿ ಒಮ್ಮತವಿದೆ. ಕಾರ್ಯಕರ್ತರ ವಿಶ್ವಾಸ ಪಡೆಯುವಲ್ಲಿ ನಾಯಕರು ಯಶಸ್ವಿಯಾದರೆ, ಸಹಜವಾಗಿಯೇ ಮತದಾರರ ವಿಶ್ವಾಸ ಪಡೆಯಲು ಸಾಧ್ಯವಾಗುತ್ತದೆ ಎಂದ ಅವರು ಯಡಿಯೂರಪ್ಪನವರ ಮಗ ಅನ್ನುವ ಅಹಂ ನನ್ನಲ್ಲಿಲ್ಲ. ಕಾರ್ಯಕರ್ತರ ಬೆನ್ನೆಲುಬಾಗಿ ಕಾರ್ಯನಿರ್ವಹಣೆ ಮಾಡುತ್ತೇನೆ ಎಂದರು.

ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಉಡುಪಿಗೆ ಪ್ರಧಾನಿ ಮೋದಿ ಭೇಟಿ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಬೇಕೆಂದು ಕರೆ ನೀಡಿದರು.

ಬಿಜೆಪಿ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಕುತ್ಯಾರು, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಸ್ವಾಗತಿಸಿ, ರವೀಂದ್ರ ಕುಮಾ‌ರ್ ಕುಕ್ಕುಂದೂರು ಕಾರ್ಯಕ್ರಮ ನಿರೂಪಿಸಿದರು.

ಶಾಸಕರ ಮನೆಗೆ ಭೇಟಿ

ಬಿಜೆಪಿ ಕಚೇರಿಯಿಂದ ವಿಜಯೇಂದ್ರ ಅವರು ಶಾಸಕ ವಿ. ಸುನಿಲ್ ಕುಮಾರ್ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಸುನಿಲ್ ಕುಮಾರ್ ಹಾಗೂ ಅವರ ತಾಯಿ ಪ್ರಮೋದಾ, ಪತ್ನಿ ಪ್ರಿಯಾಂಕಾ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಂಡರು. ದ.ಕ. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಯಶ್‌ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಲಿ, ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ ಕುತ್ಯಾರು, ಮಾಜಿ ಅಧ್ಯಕ್ಷ ಸುರೇಶ್ ಕುಯಿಲಾಡಿ, ಬಿಜೆಪಿ ಪ್ರಭಾರಿ ಉದಯ ಕುಮಾರ್ ಉಪಸ್ಥಿತರಿದ್ದರು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಟೈಗರ್ ಸರ್ಕಲ್ ಬಳಿ ಸಮಗ್ರ ದೃಷ್ಟಿ ಚಿಕಿತ್ಸಾಲಯದ ಆರಂಭ..!!

Next Post

33ನೇ ಘಟಿಕೋತ್ಸವ: ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಸಂಭ್ರಮಿಸಲು ಸಜ್ಜಾದ ಮಾಹೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
33ನೇ ಘಟಿಕೋತ್ಸವ: ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಸಂಭ್ರಮಿಸಲು ಸಜ್ಜಾದ ಮಾಹೆ..!!

33ನೇ ಘಟಿಕೋತ್ಸವ: ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಸಂಭ್ರಮಿಸಲು ಸಜ್ಜಾದ ಮಾಹೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026

Recent News