ನವೆಂಬರ್ 24: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Actor Dharmendra) ಅವರು ಇಂದು ಸೋಮವಾರ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅಸ್ವಸ್ಥಗೊಂಡಿದ್ದ ಅವರು ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತ್ತೀಚಿಗಷ್ಟೇ ಮನೆಗೆ ಬಂದಿದ್ದರು.
ಇಂದು ಸೋಮವಾರ ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು.
ಕೂಡಲೇ ವೈದ್ಯರು ಚಿಕಿತ್ಸೆ ನೀಡಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಇದಕ್ಕೂ ಮುನ್ನ ಕಳೆದ ತಿಂಗಳ ಆರಂಭದಲ್ಲಿ ಕೂಡ ನಟ ಧರ್ಮೇಂದ್ರ ಅವರು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಪಾರ್ಥಿವ ಶರೀರವನ್ನು ಸ್ವಗ್ರಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ನಾಳೆ ಅಂತಿಮ ವಿಧಿ ವಿಧಾನದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ವರದಿಯಾಗಿದೆ.








