ಉಡುಪಿ :ನವೆಂಬರ್ 25:ಪ್ರಧಾನ ಮಂತ್ರಿಯವರು ದಿನಾಂಕ: 28.11.2025 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣಮಠಕ್ಕೆ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ,ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಉಡುಪಿ ನಗರ ಠಾಣಾ ವ್ಯಾಪ್ತಿಯ, ಮಲ್ಪೆ ಠಾಣಾ ವ್ಯಾಪ್ತಿಯ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ:28/11/2025 ರಂದು ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಆದೇಶಿಸಿದೆ.
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯವನ್ನು ಇತರೆ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಿಗೊಂಡು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಯವರ ಪ್ರಕಟಣೆ ತಿಳಿಸಿದೆ









