ಕಲಬುರಗಿ : ನವೆಂಬರ್ 26:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಮಹಂತೇಶ್ ಬೀಳಗಿ, ಅವರ ಸಹೋದರ ಸೇರಿದಂತೆ ಐವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.
ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾನೆ.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.








