ಉಡುಪಿ:ನವೆಂಬರ್ 28:ಇಂದು ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ-ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮುಖಂಡ ರಾದ ಬಿ.ವೈ. ವಿಜಯೇಂದ್ರ, ರಾಜ್ಯ ಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶಾಸಕರಾದ ವಿ ಸುನಿಲ್ ಕುಮಾರ್, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.








