Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಮೇ 22ರಂದು ಟೊಬ್ಯಾಕೋ ಚಾಂಪಿಯನ್ಸ್‌ ಕಾರ್ಯಕ್ರಮ..!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ: ಮೇ 22ರಂದು ನಗರಸಭೆಯ ಪೌರಕಾರ್ಮಿಕರಿಗೆ  ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯಾದ್ಯಂತ ಟೊಬ್ಯಾಕೋ ಚಾಂಪಿಯನ್ಸ್‌ ಕಾರ್ಯಕ್ರಮ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ

ವಿಶ್ವ ತಂಬಾಕು ಮುಕ್ತ ದಿನಾಚರಣೆ ಅಂಗವಾಗಿ ಈ ಬಾರಿ “ವೀ ನೀಡ್‌ ಫ‌ುಡ್‌ ನಾಟ್‌ ಟೊಬ್ಯಾಕೋ’ ಧ್ಯೇಯ ವಾಕ್ಯದೊಂದಿಗೆ ಹಲವಾರು ಕಾರ್ಯಕ್ರಗಳು ನಡೆಯಲಿವೆ. ಒಂದು ವರ್ಷದ ಅವಧಿಯಲ್ಲಿ 900 ಮಂದಿ ಉಡುಪಿಯಲ್ಲಿರುವ ತಂಬಾಕು ವ್ಯಸನ ಮುಕ್ತಿ ಕೇಂದ್ರಕ್ಕೆ ಆಗಮಿಸಿದ್ದಾರೆ. ಅವರಲ್ಲಿ 27 ಮಂದಿ ಸಂಪೂರ್ಣ ತಂಬಾಕು ತ್ಯಜಿಸಿದ್ದಾರೆ. 160ಕ್ಕೂ ಅಧಿಕ ಮಂದಿ ತಂಬಾಕು ಸೇವನೆಯನ್ನು ಬಹುತೇಕ ಕಡಿಮೆ ಮಾಡಿದ್ದಾರೆ.

ವಿವಿಧ ಕಾಯಿಲೆಗಳಿಗೆ ತುತ್ತಾಗಿ ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ತಂಬಾಕು ಸೇವನೆಯ ವ್ಯಸನ ಇದ್ದರೆ ಅಂಥವರನ್ನು ಗುರುತಿಸಲಾಗುತ್ತದೆ. ಬಳಿಕ 15 ದಿನಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ತಂಬಾಕು ವ್ಯಸನ ಮುಕ್ತಿ ಕೇಂದ್ರಕ್ಕೆ ಆಗಮಿಸುವಂತೆ ಸೂಚಿಸಲಾಗುತ್ತದೆ. ಅವರನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿ, ಅವರು ದಿನಕ್ಕೆ ಎಷ್ಟು ಬಾರಿ ಎಷ್ಟು ಪ್ರಮಾಣದಲ್ಲಿ ತಂಬಾಕು ಸೇವನೆ ಮಾಡುತ್ತಾರೆ, ಎಷ್ಟು ಸಮಯಗಳಿಂದ ಸೇವಿಸುತ್ತಿದ್ದಾರೆ ಎಂಬ ವಿವರಗಳನ್ನು ಸಂಗ್ರಹಿಸ ಲಾಗುತ್ತದೆ. ಬಳಿಕ ಅವರಿಗೆ ಸೂಕ್ತ ಚಿಕಿತ್ಸೆ ಮೂಲಕ ಹಂತ-ಹಂತವಾಗಿ ಕಡಿಮೆ ಮಾಡುವಂತೆ ನೋಡಿಕೊಳ್ಳಲಾಗುತ್ತದೆ.
ಸರಕಾರಿ ಆಸ್ಪತ್ರೆಗಳಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿಯೂ ತಂಬಾಕು ವ್ಯಸನಿಗಳಿದ್ದರೆ ಗುಣಪಡಿಸಲು ಅವರು ಜಿಲ್ಲಾಸ್ಪತ್ರೆಗೆ ತೆರಳುವಂತೆ ಸೂಚಿಸಲು ಅವಕಾಶ ಕಲ್ಪಿಸಲಾಗಿದೆ. ಜತೆಗೆ ಆನ್‌ಲೈನ್‌ ಸೆಷನ್‌ಗಳು ಹಾಗೂ ವಿವಿಧೆಡೆ ಶಿಬಿರಗಳನ್ನು ಏರ್ಪಡಿಸುವ ಮೂಲಕ ವ್ಯಸನಿಗಳನ್ನು ತಂಬಾಕು ಮುಕ್ತಗೊಳಿಸಲು ಇಲಾಖೆ ಮುಂದಾಗಿದೆ.

ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕಾರ್ಮಿಕರು ಸಹಿತ ಹಲವಾರು ಮಂದಿ ಈಗಾಗಲೇ ಇದರಿಂದ ಜಾಗೃತರಾಗಿ ತಂಬಾಕು ತ್ಯಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನದಲ್ಲಿಯೂ ಹಲವು ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಎಂದು ಡಾ| ನಾಗರತ್ನಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ

ಜಿಲ್ಲಾ ಸರ್ವೇಕ್ಷಣ ಇಲಾಖೆ ಮೂಲಕ ಈಗಾಗಲೇ ತಂಬಾಕು ಮುಕ್ತ ಅಪಾರ್ಟ್‌ ಮೆಂಟ್‌ ಕಾರ್ಯಕ್ರಮದಡಿ ಕೆಲವೊಂದು ಅಪಾರ್ಟ್‌ಮೆಂಟ್‌ಗಳನ್ನು ಗುರುತಿಸಿ ಅಲ್ಲಿಸಿ ತಂಬಾಕು ಸೇವನೆ ಮುಕ್ತಗೊಳಿಸಲು ಉದ್ದೇಶಿಸಲಾಗಿದೆ. ಅದೇ ರೀತಿ ತಂಬಾಕು ಮುಕ್ತ ಗ್ರಾಮ ಕಾರ್ಯಕ್ರಮದಡಿ ಜಿಲ್ಲೆಯ ಉಡುಪಿ ತಾಲೂಕಿನ ಕೋಡಿಬೇಂಗ್ರೆಯನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಿದ್ದು, ಕುಂದಾಪುರದ ಕೊರ್ಗಿ ಹಾಗೂ ಕಾರ್ಕಳದ ರೆಂಜಾಳವನ್ನು ತಂಬಾಕು ಮುಕ್ತಗ್ರಾಮವನ್ನಾಗಿಸುವ ಪ್ರಕ್ರಿಯೆ ಜಾರಿಯಲ್ಲಿದೆ

.

Previous Post

ನಾಳೆ ಉಡುಪಿಯಲ್ಲಿ ‘ ಮಿನಿ ಉದ್ಯೋಗ ಮೇಳ’ …!!

Next Post

ಅಪಹರಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟ ಆರೋಪಿಗಳಿಗೆ ಜಾಮೀನು ಮಂಜೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಪಹರಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟ ಆರೋಪಿಗಳಿಗೆ ಜಾಮೀನು ಮಂಜೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News