ಉಡುಪಿ: ನವೆಂಬರ್ 30: ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಉಮೇಶ್ ಅವರು 1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳ ತನಕವೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದರು.
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು (ನ.30) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.
ಗುರು ಶಿಷ್ಯರು, ಹಾಲು ಜೇನು, ಅಪೂರ್ವ ಸಂಗಮ ಸೇರಿದಂತೆ ಕನ್ನಡದ ಬಹುತೇಕ ಸ್ಟಾರ್ ನಟರೊಂದಿಗೆ ಹಿಟ್ ಸಿನಿಮಾಗಳಲ್ಲಿ ಉಮೇಶ್ ನಟಿಸಿದ್ದಾರೆ. 350ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಉಮೇಶ್ ಅವರು ತಮ್ಮ ಹಾಸ್ಯದ ಹಾವಭಾವ ಹಾಗೂ “ಅಪಾರ್ಥ ಮಾಡ್ಕೋಬೇಡಿ” ಡೈಲಾಗ್‌ನಿಂದ ಮನೆಮಾತಾಗಿದ್ದರು.
ಉಮೇಶ್ ಅವರ ದೇಹದ ಕೆಲ ಭಾಗಕ್ಕೆ ಕ್ಯಾನ್ಸರ್ ಹರಡಿಕೊಂಡಿದ್ದು, ಈ ಕಾರಣ ಸರ್ಜರಿ ಮಾಡುವುದು ಕೂಡ ಕಷ್ಟ ಎಂದು ವೈದ್ಯರು ಹೇಳಿದ್ದರು. ಆದರೆ ಉಮೇಶ್ ಅವರು ನಗುತ್ತಲೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು.








