ಉಡುಪಿ: ಡಿಸೆಂಬರ್ 02:ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಉಡುಪಿ ಜಿಲ್ಲಾ ವಿಪ್ರ ಬಾಂಧವರ ಸಮಾಲೋಚನಾ ಸಭೆ ಆಯೋಜಿಸಲಾಯಿತು
ಸಮಾಲೋಚನಾ ಸಭೆಯಲ್ಲಿ ಶ್ರೀ ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ, ಕೋಶಾಧಿಕಾರಿ ಶ್ರೀ ಜಯಪ್ರಕಾಶ್ ಕೆದ್ಲಾಯ, ಉಡುಪಿ ಜಿಲ್ಲಾ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾದ ಶ್ರೀ ಸಂದೀಪ್ ಮಂಜ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಅಧ್ಯಕ್ಷರಾದ ಶ್ರೀ ಜಯರಾಮ ಆಚಾರ್ಯ, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾದ ಶ್ರೀ ರಘುಪತಿ ರಾವ್, ವೇದಮೂರ್ತಿ ಶ್ರೀ ಗೋಪಾಲ ಕೃಷ್ಣ ಆಸ್ರಣ್ಣ ಕಟೀಲು ಹಾಗೂ ವಿಪ್ರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.








