ಉಡುಪಿ : ಡಿಸೆಂಬರ್ 03: ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಹಾಗೂ ವಿವಿಧ ಇಲಾಖೆಗಳು ಹಾಗೂ ವಿಕಲಚೇತನರ ಸಂಘಟನೆಗಳ ಸಂಯುಕ್ತ ಆಶ್ರಯದೊಂದಿಗೆ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ 2025 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಕಲ ಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಪೂರ್ಣ ಸಹಕಾರದ ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ಸ್ವಯಂಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.
ಸಮಾರಂಭದಲ್ಲಿ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.








