ಮುಂಬೈ: ಡಿಸೆಂಬರ್ 05: ಎಂಪಿಸಿ (ಹಣಕಾಸು ನೀತಿ ಸಮಿತಿ) ನೀತಿ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 5.25% ಕ್ಕೆ ಇಳಿಸಲು ಸರ್ವಾನುಮತದಿಂದ ಮತ ಚಲಾಯಿಸಿದೆ” ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಆರ್‌ಬಿಐ ನಿರ್ಧಾರದಿಂದ ಸಾಲ (Loan) ಮತ್ತು ಇಎಂಐಗಳ (EMI) ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊಮೊಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.
ರೆಪೋ ದರದಲ್ಲಿ 25 ಮೂಲಾಂಶ ಇಳಿಕೆ ಆಗಬಹುದೆಂದು ತಜ್ಞರು ನಿರೀಕ್ಷಿಸಿದ್ದರು. ಈ ವರ್ಷದ ಫೆಬ್ರವರಿಯಿಂದ ಆರ್‌ಬಿಐ ರೆಪೋ ದರದಲ್ಲಿ 125 ಮೂಲಾಂಶದಷ್ಟು ಕಡಿತ ಮಾಡಿದೆ. ಫೆಬ್ರವರಿಯಲ್ಲಿ 25, ಏಪ್ರಿಲ್‌ನಲ್ಲಿ 25, ಜೂನ್‌ನಲ್ಲಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿತ್ತು








