ಉಡುಪಿ : ಡಿಸೆಂಬರ್ 12:ಉಡುಪಿಯ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ಇಂದು ನೆರವೇರಿತು
ಉಡುಪಿಯ ನಿಟ್ಟೂರಿನಲ್ಲಿ .ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರೇ ಮುಂದೆನಿಂತು ಮದುವೆಕಾರ್ಯ ನೆರವೇರಿಸಿದ್ದು, ಕನ್ಯಾದಾನ ಮಾಡಿದ್ದಾರೆ. ನವ ವಿವಾಹಿತರಿಗೆ ಆರತಿಯನ್ನೂ ಬೆಳಗಿದ್ದಾರೆ.
ಕಿವಿ ಕೇಳಿಸದ, ಮಾತು ಬಾರದ ಅನಾಥ ಯುವತಿಯ ಬಾಳಿಗೆ ಹಾಸನದ ಕೃಷಿಕ ಬೆಳಕಾಗಿ ಬಂದರೆ, ವಿವಾಹವಾದ ಮತ್ತೋರ್ವ ಯುವತಿ ಈಗ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ. ಎಂಕಾಂ ಮಾಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಯುವಕನ ಜೊತೆ ಈಕೆ ಸಪ್ತಪದಿ ತುಳಿದಿದ್ದು, ಆಕೆಯ ಮುಂದಿನ ಓದಿನ ಜವಾಬ್ದಾರಿಯನ್ನೂ ಆತ ಹೊತ್ತಿದ್ದಾನೆ. ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗಿಗೆ ಉದ್ಯೋಗಸ್ಥ ಯುವಕನೇ ಬೇಕೆಂದು ಕಾದು ಕುಳಿತು ರಾಜ್ಯ ಮಹಿಳಾ ನಿಲಯ ಮದುವೆ ಮಾಡಿಸಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಮದುವೆಗೆ ಹಾಜರಾಗಿದ್ದು, ನವ ವಿವಾಹಿತರ ಹೆಸರಿಗೆ 50 ಸಾವಿರ ರೂ. ಹಣ ಡೆಪಾಸಿಟ್ ಕೂಡ ಮಾಡಲಾಗಿದೆ. ಇನ್ನು ಬ್ರಾಹ್ಮಣ ಸಮುದಾಯ ಸೇರಿ ಕೃಷಿಕ ಕುಟುಂಬಗಳ ಯುವಕರಿಗೆ ಮದುವೆಯಾಗಲು ಕನ್ಯೆಯರ ಅಭಾವ ಹಿನ್ನಲೆ ಮದುವೆಗೆ ಕನ್ಯೆಯರಿಗೆ ಆಗ್ರಹಿಸಿ ಉಡುಪಿ ರಾಜ್ಯ ಮಹಿಳಾ ನಿಲಯಕ್ಕೆ ಅತೀ ಹೆಚ್ಚು ಬೇಡಿಕೆ ಬರುತ್ತಿವೆ ಎನ್ನಲಾಗಿದೆ.








