ಉಡುಪಿ: ಡಿಸೆಂಬರ್ 16 : ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಆಕಸ್ಮಿಕವಾಗಿ ಒಂದೂವರೆ ವರ್ಷದ ಮಗು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಂದು (ಡಿ.16) ನಡೆದಿದೆ.
ಘಟನೆ ಏನು??
ಮಗುವನ್ನು ಎತ್ತಿಕೊಂಡೇ ಬಾವಿಯಿಂದ ತಾಯಿ ನೀರು ಎಳೆಯುತ್ತಿದ್ದಾಗ ಮಗು ಆಕೆಯ ಕೈಯಿಂದ ಜಾರಿ ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಕೂಡಲೇ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದಿದ್ದಾರೆ. ಆದರೆ, ಅಷ್ಟರಾಗಲೇ ಮಗು ಮೃತಪಟ್ಟಿತ್ತು ಎನ್ನಲಾಗಿದೆ
ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಭರತೇಶ್ ಕಂಕಣವಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯ ವಾಗಬೇಕಿದೆ.




