Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆ…!!

Dhrishya News by Dhrishya News
18/12/2025
in ಸುದ್ದಿಗಳು
0
ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆ…!!
0
SHARES
5
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 18:  ಪರಸ್ತ್ರೀ ಅಪಹರಣ ಭೂಷಣವಲ್ಲ. ಅಂಥವರಿಂದ ವಿನಾಶ ಕಂಡ ಅನೇಕ ಉದಾಹರಣೆಗಳಿವೆ. ಯುದ್ಧಕ್ಕೆ ಭುಜಬಲ ಒಂದೇ ಸಾಲದು ಧರ್ಮದ ಬಲವೂ ಬೇಕು. ಶ್ರೀರಾಮನು ಸಾಮಾನ್ಯ ಮನುಷ್ಯನಲ್ಲ. ಆತನಲ್ಲಿ ದೈವಬಲದ ಶಕ್ತಿ ಇರುವುದರಿಂದ ನೀನು ವಿವೇಚನೆಯನ್ನು ಕಳೆದುಕೊಳ್ಳದೆ ಸೀತೆಯನ್ನು ರಾಮನಿಗೆ ಒಪ್ಪಿಸು ಎಂಬ ತಮ್ಮ ವಿಭೀಷಣದ ಮಾತಿಗೆ ಕುಪಿತನಾದ ರಾವಣ ವಿಭೀಷಣನನ್ನೂ ಹೊರಗೆ ಹಾಕಿದ. ಹಾಗೆ ಅಲ್ಲಿಂದ ಹೊರಬಿದ್ದ ವಿಭೀಷಣ ಶ್ರೀರಾಮನ ರಕ್ಷಣೆಯನ್ನು ಪಡೆಯುತ್ತಾನೆ ಎಂಬುದಾಗಿ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.

 ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಈ ಮಾಲೆಯ ಕೊನೆಯ ಕಾರ್ಯಕ್ರಮ ದ್ವಾದಶ ಸೋಪಾನ ‘ ಮಂಗಲಂ ಕೋಸಲೇಂದ್ರಾಯ’ ಎಂಬ ವಿಷಯದ ಕುರಿತು ಡಿಸೆಂಬರ್ ೧೩ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.     

ಯುದ್ಧದಿಂದಾಗುವ ಹಾನಿಗಳನ್ನು ತಪ್ಪಿಸುವುದಕ್ಕಾಗಿ ರಾವಣನ ಜೊತೆ ಸಂಧಾನಕ್ಕಾಗಿ ಅಂಗಧನನ್ನು ಕಳಿಸಿದರೂ ಆತನ ವಿವೇಕದ ಮಾತುಗಳನ್ನು ರಾವಣ ಕೇಳಲೇ ಇಲ್ಲ. ಯುದ್ಧ ಅನಿವಾರ್ಯ ವಾಗಿ ರಾವಣನ ವಧೆಯಾಗಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿ ಶ್ರೀರಾಮ ಸೀತೆಯೊಂದಿಗೆ ಮತ್ತೆ ಅಯೋಧ್ಯೆಗೆ ಮರಳಿದ ಎಂದು ಉಪನ್ಯಾಸಕ್ಕೆ ಮಂಗಲವನ್ನು ಹಾಡಿದರು.

  ೨೦೨೫ರ ಇಡೀ ವರ್ಷ ರಾಮಾಯಣ ಉಪನ್ಯಾಸ ಮಾಲೆಯನ್ನು ನಡೆಸಿಕೊಟ್ಟ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಹಾಗೂ ಪ್ರತೀ ತಿಂಗಳು ಪ್ರಾರ್ಥನೆಯನ್ನು ನೆರವೇರಿಸಿದ ಕು. ಶಾರ್ವರಿ ಶ್ಯಾನುಭೋಗ್ ಅವರನ್ನು ಗೌರವಿಸಲಾಯಿತು.             

     ಡಾ.ನಾ.ಮೊಗಸಾಲೆ, ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಶ್ರೀಮತಿ ಸುಲೋಚನಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಶ್ರೀ ನಿತ್ಯಾನಂದ ಪೈ ವಂದಿಸಿದರು.

Previous Post

ಪ್ರತಿಷ್ಠಿತ ಅಲೆವೂರು ಗ್ರೂಪ್ ಆವಾರ್ಡ್‌ಗೆ ಮಾನಸಿ ಸುಧೀರ್ ಆಯ್ಕೆ..!!

Next Post

ಮೆಟಾ AI ಚಾಲಿತ ರೇ-ಬ್ಯಾನ್ ಮೆಟಾ ಕನ್ನಡಕಗಳೊಂದಿಗೆ ನೀವೀಗ ಕನ್ನಡ ಮತ್ತು ತೆಲುಗಿನಲ್ಲಿಯೂ ಮಾತನಾಡಬಹುದು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೆಟಾ AI ಚಾಲಿತ ರೇ-ಬ್ಯಾನ್ ಮೆಟಾ ಕನ್ನಡಕಗಳೊಂದಿಗೆ ನೀವೀಗ ಕನ್ನಡ ಮತ್ತು ತೆಲುಗಿನಲ್ಲಿಯೂ ಮಾತನಾಡಬಹುದು..!!

ಮೆಟಾ AI ಚಾಲಿತ ರೇ-ಬ್ಯಾನ್ ಮೆಟಾ ಕನ್ನಡಕಗಳೊಂದಿಗೆ ನೀವೀಗ ಕನ್ನಡ ಮತ್ತು ತೆಲುಗಿನಲ್ಲಿಯೂ ಮಾತನಾಡಬಹುದು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

18/09/2026
ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

18/09/2026

Recent News

imunify-bot-check