ಉಡುಪಿ:ಡಿಸೆಂಬರ್ 21:ರಾಜ್ಯದಲ್ಲಿ ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ 2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಪೊಷಕರಲ್ಲಿ ಮನವಿ ಮಾಡಿದೆ. ಇಂದು ಅಂಗನವಾಡಿ ಸೇರಿದಂತೆ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಮನೆಮನೆಗೆ ಕಾರ್ಯಕರ್ತರು ಬಂದು ಲಸಿಕೆ ನೀಡುತ್ತಾರೆ.
ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.





