ಉಡುಪಿ : ಡಿಸೆಂಬರ್ 22:ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 21-12-2025 ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರಾದ ದಿವೇಶ್ ಶೆಟ್ಟಿ, ಸವಿತಾ ಶೆಟ್ಟಿ, ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ ಪಾಂಗಾಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.






