ಕಾರ್ಕಳ:ಡಿಸೆಂಬರ್ 28:ಸಮ್ಮೇಳನಾಧ್ಯಕ್ಷರಾದ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕಿನ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕಾರ್ಕಳದ ಪ್ರಸಿದ್ದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಭಾರಂಭಗೊಂಡಿತು.
ಸಮ್ಮೇಳನದ ಅಂಗವಾಗಿ ಪೂರ್ವಾಹ್ನ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ-ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣವನ್ನು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಲ್ಲಿ ಪ್ರಭಾಕರ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ ಉಪಸ್ಥಿತರಿದ್ದರು.






