ಕುಂದಾಪುರ: ಡಿಸೆಂಬರ್ 29:ಸೋಮವಾರ ಬೆಳಗಿನ ಜಾವ ಕುಂದಾಪುರದ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ
ಸೋಮವಾರ ಮುಂಜಾನೆ ಮೂರು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಮಾಹಿತಿ ಲಭ್ಯವಾಗಿದ್ದು, ನಂತರ ಬೆಂಕಿ ಪುಸ್ತಕದಂಗಡಿ ಸೇರಿದಂತೆ ಐದಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ






