Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಚಾರಣೆಗೆ ಕಟ್ಟುನಿಟ್ಟಿನ ಸೂಚನೆ:ಬಿಗಿ ಪೊಲೀಸ್ ಬಂದೋಬಸ್ತ್..!!

Dhrishya News by Dhrishya News
31/12/2025
in मौसम
0
0
SHARES
51
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 31 :ಉಡುಪಿ ಜಿಲ್ಲಾ ಪೊಲೀಸ್ ಹೊಸ ವರ್ಷಾಚರಣೆಯನ್ನು ಶಾಂತಿ ಮತ್ತು ಸುವ್ಯವಸ್ಥೆಯೊಂದಿಗೆ ನಡೆಸುವ ಉದ್ದೇಶದಿಂದ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. 

ಹೊಸ ವರ್ಷದ ದಿನದಂದು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈವೇ ಪಟ್ರೋಲ್ ಹಾಗೂ ಹೊಯ್ಸಳ ವಾಹನಗಳನ್ನು ಗಸ್ತಿಗೆ ನಿಯೋಜಿಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಾಲನೆ, ವೀಲಿಂಗ್ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಡಿಸೆಂಬರ್ 31ರಂದು ಕರಾವಳಿ ಪ್ರದೇಶಗಳ ಸಮುದ್ರ ತೀರಗಳು ಹಾಗೂ ಬೀಚ್ಗಳಲ್ಲಿ ನಡೆಯುವ ಹೊಸ ವರ್ಷದ ಆಚರಣೆಗಳ ಸುರಕ್ಷತಾ ಕ್ರಮಗಳ ಕುರಿತು ಸಿಎಸ್ ಪಿ ಠಾಣೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಠಾಣಾಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಹೋಂ ಸ್ಟೇಗಳು, ಹೋಟೆಲ್ಗಳು, ರೆಸಾರ್ಟ್ಗಳು, ಪಬ್ಗಳು ಹಾಗೂ ಬಾರ್ಗಳನ್ನು ಪರಿಶೀಲಿಸಲಾಗುತ್ತಿದ್ದು, ರೇವ್ ಪಾರ್ಟಿ, ಡ್ರಗ್ ಪಾರ್ಟಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಸಾಮಾಜಿಕ ಜಾಲತಾಣಗಳು, ಆನ್ಲೈನ್ ಬುಕಿಂಗ್ ಪ್ಲಾಟ್ಫಾರ್ಮ್ಗಳು ಹಾಗೂ ವೆಬ್ ಪುಟಗಳ ಮೇಲೂ ಪೊಲೀಸ್ ನಿಗಾವಹಿಸಲಾಗಿದೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರುಷ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಗರ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾ ಅಕ್ಕಪಡೆ ತಂಡವನ್ನು ಕಾರ್ಯನಿರ್ವಹಿಸಲು ನಿಯೋಜಿಸಲಾಗಿದೆ. ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ವಿದೇಶಿ ನಾಗರಿಕರ ಸುರಕ್ಷತೆಯ ಮೇಲೂ ಗಮನ ಹರಿಸಲಾಗಿದೆ.

ದೊಡ್ಡ ಸಾರ್ವಜನಿಕ ಸಮಾವೇಶಗಳ ಮೇಲ್ವಿಚಾರಣೆಗಾಗಿ ಡ್ರೋನ್ ಕ್ಯಾಮೆರಾಗಳ ಬಳಕೆ ಮಾಡಲಾಗುತ್ತಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಕ್ಕೆ ಜೊತೆಗೆ 3 ಡ್ರೋನ್ ಕ್ಯಾಮೆರಾ, 10 ಹೆಚ್ಚುವರಿ ಪೆಟ್ರೋಲಿಂಗ್ ವಾಹನಗಳು ಹಾಗೂ 24 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗಿದೆ.

ಜಿಲ್ಲೆಯ ಆಯ್ದ ಸ್ಥಳಗಳಲ್ಲಿ 13 ಡಿಎಆರ್ ತುಕಡಿ ಹಾಗೂ 2 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಪೊಲೀಸ್ ಇಲಾಖೆ ಜವಾಬ್ದಾರಿಯಿಂದ ಆಚರಿಸಿ ಎಂಬ ಸಂದೇಶದೊಂದಿಗೆ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸಂಯಮಿತ ಹೊಸ ವರ್ಷಾಚರಣೆಗೆ ಮನವಿ ಮಾಡಿದೆ

Previous Post

ಶೀರೂರು ಪರ್ಯಾಯ ಕಟೀಲಿನಲ್ಲಿ ಸಮಾಲೋಚನಾ ಸಭೆ..!!

Next Post

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ವಿಧಿವಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ವಿಧಿವಶ..!!

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ವಿಧಿವಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check