ಜನವರಿ 01:ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಸವಾಲಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ
ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.








