ಉಡುಪಿ: ಜನವರಿ 02: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡೆ ಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿ ಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ- udupi.nic.in- ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.








