ಉಡುಪಿ: ಜನವರಿ 09: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಸದವಸರದಲ್ಲಿ ಸಿದ್ಧಪಡಿಸಲಾದ ಸುವರ್ಣ ಗೀತಾ ಬೃಹತ್ ಪುಸ್ತಕವನ್ನು ಜ.8ರಂದು ಸಂಜೆ 5 ಗಂಟೆಗೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಸಲಾಯಿತು
ದೆಹಲಿಯ ಶ್ರೀಕೃಷ್ಣ ಭಕ್ತರಾದ ಕೇಂದ್ರ ಗೃಹಸಚಿವಾಲಯದ ನಿವೃತ್ತ ಕಾರ್ಯದರ್ಶಿ ಲಕ್ಷ್ಮೀನಾರಾಯಣನ್ ಅವರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿ ಕೋಟಿ ಗೀತಾ ಲೇಖನಯಜ್ಞದ ಸ್ಮರಣಿಕೆಯಾಗಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಸಮರ್ಪಿಸಿದ್ದಾರೆ.
ಈ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆಯಲ್ಲಿ ತರಲಾಯಿತು
ಬಳಿಕ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಢರಾಪುರ ದೇವಳ ಟ್ರಸ್ಟ್ ಅಧ್ಯಕ್ಷ ಗಹನೀನಾಥ ಜ್ಞಾನೇಶ್ವರ ಮಹಾರಾಜ್ ಔಶೇಕರ್, ಆಳಂದ ಜ್ಞಾನೇಶ್ವರ ಮಹಾರಾಜ್ ಪೀಠದ ಪ್ರಧಾನ ಅರ್ಚಕ ಗಿರೀಶ್ ತುಕ್ರಿ, ನವದೆಹಲಿಯ ಇಸ್ರೋ ಮಾಜಿ ನಿರ್ದೇಶಕ ಡಾ.ಎಸ್.ವಿ. ಶರ್ಮ ಹಾಗೂ ದಾನಿ ಲಕ್ಷ್ಮೀನಾರಾಯಣನ್ ಅಭ್ಯಾಗತರಾಗಿ ಭಾಗವಹಿಸಿದರು.
ಭಗವದ್ಗೀತಾ ಪ್ರಚಾರಾರ್ಥವಾಗಿ ಈ ಪುಸ್ತಕವನ್ನು ಗೀತಾ ಮಂದಿರದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.






