Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಆರೋಪ: ಪುತ್ತೂರಿಗೆ ಯತ್ನಾಳ್ ಭೇಟಿ..!!

Dhrishya News by Dhrishya News
19/05/2023
in ರಾಜ್ಯ/ ರಾಷ್ಟ್ರೀಯ
0
0
SHARES
22
VIEWS
Share on FacebookShare on Twitter

ಮಂಗಳೂರು, ಮೇ, 19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಫೋಟೋ ಅಳವಡಿಸಿದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರಿಗೆ ಪೊಲೀಸರು ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.

ಆದ್ದರಿಂದ ಪೊಲೀಸರ ವಿರುದ್ಧ ಇಲಾಖೆ ಕೊನೆಗೂ ಶಿಸ್ತು ಕ್ರಮ ಕೈಗೊಂಡಿದೆ. ಪುತ್ತೂರು ಗ್ರಾಮಾಂತರ ಠಾಣೆ ಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ನಗರ ಠಾಣೆ ಸಿಬ್ಬಂದಿ ಹರ್ಷಿತ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಲ್ಲದೆ ಇಂದು ಪುತ್ತೂರಿಗೆ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಭೇಟಿ ನೀಡಲಿದ್ದು, ಹಲ್ಲೆಗೊಳಗಾದ ಕಾರ್ಯಕರ್ತರನ್ನು ಮಾತನಾಡಿಸಲಿದ್ದಾರೆ. ಹಾಗೂ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪುತ್ತೂರು ಡಿವೈಎಸ್‌ಪಿ ವೀರಯ್ಯ ಹೀರೇಮಠ್ ವಿರುದ್ಧ ಇಲಾಖೆ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ. ಇನ್ನು ದೌರ್ಜನ್ಯಕ್ಕೊಳಗಾದ ಅವಿನಾಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, ರಾಜ್ಯಾದ್ಯಂತ ಪೊಲೀಸರ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಾಟೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಪ್ರದೇಶವನ್ನು ಕುರೂಪಗೊಳಿಸಿದ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ ಪ್ರಕರಣ ಸಂಬಂಧ 9 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ವಶದಲ್ಲಿದ್ದವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನುವ ಮಾಹಿತಿ ಹರಿದಾಡಿದೆ. ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ದೌರ್ಜನ್ಯಕ್ಕೊಳಗಾದ ಅವಿನಾಶ್ ನೀಡಿದ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು ಡಿವೈಎಸ್‌ಪಿ, ಪುತ್ತೂರು ಗ್ರಾಮಾಂತರ ಠಾಣೆ ಎಸ್‌ಐ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ವಿಕ್ರಮ್ ಅಮಾಟೆ ತಿಳಿಸಿದರು.

ಇನ್ನು ಕಾರ್ಯಕರ್ತರ ಮೇಲಿನ ಪೊಲೀಸರ ಹಲ್ಲೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಇಂದು ಪುತ್ತೂರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಲಿದ್ದಾರೆ. ‌ಗಂಭೀರ ಗಾಯಕ್ಕೊಳಗಾಗಿ ಆಸ್ಪತ್ರೆಗೆ ಸೇರಿರುವ ಬಿಜೆಪಿ ಕಾರ್ಯಕರ್ತರುನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಈಗಾಗಲೇ ಗಾಯಗೊಂಡ ಕಾರ್ಯಕರ್ತರಿಗೆ ಫೋನ್ ಮೂಲಕ‌ ಯತ್ನಾಳ್ ಸಾಂತ್ವನ ಹೇಳಿದ್ದು, ಪೊಲೀಸರನ್ನು ಅಮಾನತು ಮಾಡದೇ ಹೋದರೆ ಹೋರಾಟದ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ ಎನ್ನಲಾಗಿದೆ.

Previous Post

ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಹೊರಟ ಪ್ರಧಾನಿ ಮೋದಿ..!!

Next Post

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇದೆ – ಅರ್ಜಿ ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇದೆ - ಅರ್ಜಿ ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check