ಉಡುಪಿ:ಜನವರಿ 13: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಸಂತ ಸಂದೇಶ – ಸಂತ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ ಯಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ನಂತರ ರಾಜಾಂಗಣದಲ್ಲಿ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಇವರಿಗೆ ಪುತ್ತಿಗೆ ಮಠದ ಸಂಸ್ಥಾನ ಗೌರವವನ್ನು ಸಲ್ಲಿಸಲಾಯಿತು. ವಿವಿಧ ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.






