Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಿರೂರು ಪರ್ಯಾಯ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ದ ವ್ಯವಸ್ಥೆ ಮತ್ತು ಸೂಚನೆ..!!

Dhrishya News by Dhrishya News
14/01/2026
in ಮುಖಪುಟ
0
ಶಿರೂರು ಪರ್ಯಾಯ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ದ ವ್ಯವಸ್ಥೆ ಮತ್ತು ಸೂಚನೆ..!!
0
SHARES
23
VIEWS
Share on FacebookShare on Twitter

ಉಡುಪಿ: ಜನವರಿ 14:ಉಡುಪಿ ಯ ಶ್ರೀಕೃಷ್ಣ ಮಠದಲ್ಲಿ ಜನವರಿ 17ಮತ್ತು 18ರಂದು ನಡೆಯಲಿರುವ ಪರ್ಯಾಯ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಜನವರಿ 17ರ ಅಪರಾಹ್ನ 2 ಗಂಟೆಯಿಂದ ಜ.18ರ ಬೆಳಗ್ಗೆ 7 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಹಾಗೂ ಪಾರ್ಕಿಂಗ್ ನಿಷೇಧದ ಬಗ್ಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಈ ಕೆಳಗಿನಂತೆ ಅಧಿಸೂಚನೆ ಹೊರಡಿಸಿ ಅದೇಶಿಸಿದ್ದಾರೆ

ಮಂಗಳೂರಿಂದ ಉಡುಪಿ, ಮಣಿಪಾಲಕ್ಕೆ ಬರುವ ವಾಹನಗಳು:

ಜನವರಿ.17 ರಂದು ಅಪರಾಹ್ನ 2 ರಿಂದ ಜನವರಿ.18ರ ಬೆಳಗ್ಗೆ 7 ರವರೆಗೆ ನೇರವಾಗಿ ರಾ.ಹೆ 66ರಲ್ಲಿ ಕರಾವಳಿ ಜಂಕ್ಷನ್ ತಲುಪಿ ನಂತರ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಮುಂದುವರಿದು ಮಣಿಪಾಲಕ್ಕೆ ಹೋಗಬೇಕು.

ಉಡುಪಿ ನಗರಕ್ಕೆ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯವರೆಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಸಂಜೆ 7ರಿಂದ ಬೆಳಗ್ಗೆ 7 ಗಂಟೆ ವರೆಗೆ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್ ನಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ಮಂಗಳೂರು ಕಡೆಗೆ ರಾ.ಹೆ 66ರಲ್ಲಿ ಅಂಬಲಪಾಡಿ, ಬಲಾಯಿಪಾದೆ ಮೂಲಕ ಹೋಗಬೇಕು. ಮಣಿಪಾಲಕ್ಕೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್‌ನಿಂದ ಮುಂದಕ್ಕೆ ಸಾಗಿ ಅಂಬಾಗಿಲು ಮೂಲಕ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಕುಂದಾಪುರದಿಂದ ಉಡುಪಿ, ಮಣಿಪಾಲ ಕಡೆಗೆ: ಜನವರಿ. 17ರಂದು ಸಂಜೆ 7 ಗಂಟೆಯ ತನಕ ಕುಂದಾಪುರ-ಬ್ರಹ್ಮಾವರ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವ ಎಲ್ಲಾ ವಾಹನಗಳು ಅಂಬಾಗಿಲು ಮೂಲಕ ರಾ.ಹೆ.66ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು.

ಸಂಜೆ 7 ಗಂಟೆಯಿಂದ ಬೆಳಗ್ಗೆ 7ರವರೆಗೆ ಕುಂದಾಪುರದಿಂದ ಉಡುಪಿ ನಗರಕ್ಕೆ ಆಗಮಿಸುವ ಎಲ್ಲಾ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಸಂಜೆ 7:00ರಿಂದ ಬೆಳಗ್ಗೆ 7:00ರವರೆಗೆ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆ ಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪುಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಸಂತೆಕಟ್ಟೆ ಮೂಲಕ ಕುಂದಾಪುರ ಕಡೆಗೆ ಹೋಗಬೇಕು. ಮಣಿಪಾಲಕ್ಕೆ ಹೋಗುವ ವಾಹನಗಳು ಅಂಬಾಗಿಲು ಮೂಲಕ ಪೆರಂಪಳ್ಳಿ ರಸ್ತೆಯಲ್ಲಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಉಡುಪಿಗೆ ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗೆ ಹೋಗಿ ಬರುವ ವಾಹನಗಳು: ಜ.17ರ ಸಂಜೆ 7 ಗಂಟೆಯ ತನಕ ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವ ವಾಹನಗಳು ಚಿಟ್ಪಾಡಿ, ಬೀಡಿನಗುಡ್ಡೆ, ಶಾರದ ಕಲ್ಯಾಣ ಮಂಟಪ, ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು.

ಉಡುಪಿ ನಗರಕ್ಕೆ ಸಂಜೆ 7:00ರಿಂದ ಬೆಳಗ್ಗೆ 7:00ರವರೆಗೆ ಎಲ್ಲಾ ವಾಹನ ಗಳು ಪ್ರವೇಶಿಸುವುದನ್ನು ನಿಷೇಧಿಸಲಾ ಗಿದೆ. ಸಂಜೆ 7:00ರಿಂದ ಬೆಳಗ್ಗೆ 7:00 ರವರೆಗೆ ಬೀಡಿನಗುಡ್ಡೆ, ಚಿಟ್ಪಾಡಿ ಮುಖಾಂತರ ಮಿಷನ್ ಕಂಪೌಂಡ್ ರಸ್ತೆ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ವಾಪಾಸು ಹಿಂದಿರುಗಬೇಕು.

ಕಾರ್ಕಳ-ಮಣಿಪಾಲದಿಂದ ಉಡುಪಿಗೆ: ಜ.17ರಂದು ಸಂಜೆ 7:00ರ ವರೆಗೆ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್‌ನಿಲ್ದಾಣಕ್ಕೆ ಪ್ರವೇಶಿಸಬೇಕು.

ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಿದೆ. ಸಂಜೆ 7:00ರಿಂದ ಬೆಳಗ್ಗೆ 7:00ರ ತನಕ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ್, ಪೆರಂಪಳ್ಳಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್‌ಗೆ ಆಗಮಿಸಬೇಕು. ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂ ದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಮಂಗಳೂರಿನಿಂದ ಮುಂಬೈಗೆ-ಬೆಂಗಳೂರಿಗೆ: ಜ.17ರಂದು ಸಂಜೆ ಮಂಗಳೂರಿನಿಂದ ಮುಂಬೈ, ಹುಬ್ಬಳ್ಳಿ ಕಡೆಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆಎಎಸ್ಸಾರ್ಟಿಸಿ ಬಸ್ಸುಗಳು ಪ್ರಯಾಣಿಕರನ್ನು ಬಲೈಪಾದೆ ಬಳಿ ಹತ್ತಿಸಿಕೊಂಡು ಹೋಗಬೇಕು. ಬೆಂಗಳೂರು ಕಡೆಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಪ್ರಯಾಣಿಕರನ್ನು ಮಣಿಪಾಲ ಇನ್ ಬಳಿ ಹತ್ತಿಸಿಕೊಂಡು ಹೋಗಬೇಕು.

ಜನವರಿ.17ರಂದು ಸಂಜೆ 7 ಗಂಟೆಯ ತನಕ ಮಂಗಳೂರಿನಿಂದ ಮುಂಬೈ ಕಡೆಗೆ ಮತ್ತು ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಬಲೈಪಾದೆ, ಅಂಬಲಪಾಡಿ, ಕರಾವಳಿ ಜಂಕ್ಷನ್, ಬನ್ನಂಜೆ, ಸಿಟಿ ಬಸ್ಸುನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ಸು ನಿಲ್ಯಾಣಕ್ಕೆ ಬಂದು ಪ್ರಯಾಣಿಕರನ್ನು ಕರೆದುಕೊಂಡು ಅದೇ ಮಾರ್ಗವಾಗಿ ಪ್ರಯಾಣವನ್ನು ಮುಂದುವರಿಸಬೇಕು.

ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಎಲ್ಲಾ ವಾಹನಗಳು ಪ್ರವೇಶವನ್ನು ನಿಷೇಧಿಸಿದೆ. ಸಂಜೆ 7 ಗಂಟೆುಂದ ಬೆಳಗ್ಗೆ 7ರತನಕ ಮುಂಬೈ / ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಕರಾವಳಿ ಜಂಕ್ಷನ್‌ನಲ್ಲೇ ನಿಂತು ಅಲ್ಲಿಯೇ ಎರಡೂ ಬದಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಮುಂಬೈ, ಬೆಂಗಳೂರಿಗೆ ಪ್ರಯಾಣ ಬೆಳೆಸೂಏಕು.

ಮಲ್ಪೆ ಕಡೆಯಿಂದ ಉಡುಪಿಗೆ: ಜನವರಿ.17ರಂದು ಸಂಜೆ 6 ಗಂಟೆಯ ತನಕ ಮಲ್ಪೆಯಿಂದ ಬರುವ ಎಲ್ಲಾ ಬಸ್ಸುಗಳು, ಆದಿಉಡುಪಿ, ಕರಾವಳಿ ಜಂಕ್ಷನ್, ಬನ್ನಂಜೆ ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಿದೆ. ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಮಲ್ಪೆ ಕಡೆಯಿಂದ ಬರುವ ಎಲ್ಲಾ ವಾಹನಗಳು ಆದಿ ಉಡುಪಿ ಜಂಕ್ಷನ್ ತನಕ ಬಂದು ನಂತರ ವಾಪಾಸು ಅದೇ ಮಾರ್ಗದಲ್ಲಿ ಮಲ್ಪೆ ಕಡೆಗೆ ಹಿಂದಿರುಗಬೇಕು. ಮಂಗಳೂರು, ಕುಂದಾಪುರ ಕಡೆಗೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್ ಮೂಲಕ ಹಾದು ಹೋಗಬೇಕು.

ವಾಹನ ನಿಲುಗಡೆ ನಿಷೇಧ ಮಾಡಿರುವ ಸ್ಥಳಗಳು

ಜನವರಿ.17ರ ಅಪರಾಹ್ನ 2:00ರಿಂದ ಜ.18ರ ಬೆಳಗ್ಗೆ 7:00ಗಂಟೆಯವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಎಲ್ಲಾ ಮಾದರಿಯ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.

ಅಂಬಲಪಾಡಿಯಿಂದ ಜೋಡುಕಟ್ಟೆಯವರೆಗೆ ಎರಡೂ ಬದಿಯಲ್ಲಿ. ಬ್ರಹ್ಮಗಿರಿಯಿಂದ ಬನ್ನಂಜೆವರೆಗೆ, ಲಯನ್ ಸರ್ಕಲ್‌ನಿಂದ ಮಿಷನ್ ಕಂಪೌಂಡ್‌ವರೆಗೆ. ಬೇತಲ್ ಚರ್ಚ್‌ನಿಂದ ಸಿಂಡಿಕೇಟ್ ಸರ್ಕಲ್‌ವರೆಗೆ, ಸಿಂಡಿಕೇಟ್ ಸರ್ಕಲ್‌ನಿಂದ ತ್ರಿವೇಣಿ ಜಂಕ್ಷನ್ ತನಕ.

ಹನುಮಾನ್ ಜಂಕ್ಷನ್‌ನಿಂದ (ತ್ರಿವೇಣಿ ಜಂಕ್ಷನ್)ನಿಂದ ಸಂಸ್ಕೃತ ಕಾಲೇಜ್ ಜಂಕ್ಷನ್, ಕನಕದಾಸ ರಸ್ತೆಯ ಪಲಿಮಾರು ಮಠದ ಗೇಟ್ ತನಕ. ಸಿಟಿ ಸೆಂಟರ್‌ನಿಂದ, ಚಿತ್ರರಂಜನ್ ಸರ್ಕಲ್, ಮಿತ್ರಾ ಆಸ್ಪತ್ರೆಯ ತನಕ. ಐಡಿಯಲ್ ಜಂಕ್ಷನ್, ಎಲ್.ವಿ.ಟಿ ತೆಂಕಪೇಟೆ ದೇವಸ್ಥಾನ, ಪಿಪಿಸಿ ಕಾಲೇಜ್ ತನಕ. ಐಡಿಯಲ್ ಜಂಕ್ಷನ್‌ನಿಂದ ಹರಿಶ್ಚಂದ್ರ ಮಾರ್ಗ, ವಿದ್ಯೋದಯ ಶಾಲೆಯವರೆಗೆ. ಕಲ್ಸಂಕದಿಂದ ರಾಜಾಂಗಣ ಪಾಕಿರ್ಂಗ್ ಸ್ಥಳದವರೆಗೆ. ಓಷಿಯನ್ ಪರ್ಲ್ ಹೊಟೇಲ್‌ನಿಂದ, ಕಟ್ಟೆ ಆಚಾರ್ಯ ಮಾರ್ಗ, ಮಥುರಾ ಹೊಟೇಲ್‌ವರೆಗೆ.

ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗಳಲ್ಲಿ ಯಾವುದೇ ವಾಹನ ಪ್ರವೇಶ ಮತ್ತು ನಿಲುಗಡೆಯನ್ನು ನಿಷೇಧಿಸಿದೆ. ಪೇಜಾವರ ಮಠದ ಹಿಂಭಾಗದಲ್ಲಿ ಲಘು ಹಾಗೂ ದ್ವಿಚಕ್ರ ವಾಹನ ನಿಲುಗಡೆ ಮಾಡುತ್ತಿದ್ದು, ವುಡ್‌ಲ್ಯಾಂಡ್ ಹೋಟೇಲ್‌ನಿಂದ ಪೇಜಾವರ ಮಠದ ಹಿಂಭಾಗದವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.

ಪುರಪ್ರವೇಶ ಹಾಗೂ ಹೊರಕಾಣಿಕೆಯ ದಿನದಂದು ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಲಿರುವುದರಿಂದ ಸುಗಮ ಸಂಚಾರದ ಬಗ್ಗೆ ತ್ರಿವೇಣಿ ಜಂಕ್ಷನ್‌ನಿಂದ, ಸಂಸ್ಕೃತ ಕಾಲೇಜ್, ಕನಕದಾಸ ರಸ್ತೆಯ ಪಲಿಮಾರು ಮಠದ ಗೇಟ್ ತನಕ ಜನವರಿ 17 ರಿಂದ 18ರ ಸಂಜೆ ತನಕ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.

ಜನವರಿ.17ರಂದು ಬೆಳಗ್ಗೆ 9 ಗಂಟೆಯಿಂದ ಜ.18ರ ಬೆಳಗ್ಗೆ 7 ಗಂಟೆಯವರೆಗೆ ಹೆಚ್ಚುವರಿಯಾಗಿ ಸ್ವಾಗತ ಗೋಪುರ, ಕಿನ್ನಿಮುಲ್ಕಿ, ಗೋವಿಂದ ಕಲ್ಯಾಣ ಮಂಟಪ, ಜೋಡುಕಟ್ಟೆ, ಲಯನ್ ಸರ್ಕಲ್, ಡಯಾನ ಸರ್ಕಲ್, ಮಿತ್ರ ಜಂಕ್ಷನ್, ಐಡಿಯಲ್ ಜಂಕ್ಷನ್, ತೆಂಕಪೇಟೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ಯಲ್ಲಿ ಅದೇಶಿಸಲಾಗಿದೆ

Previous Post

ಪರ್ಯಾಯ ಶ್ರೀ ಪುತ್ತಿಗೆ ಮಠದ ಸಂತ ಸಂದೇಶ – ಸಂತ ಸನ್ಮಾನ ಕಾರ್ಯಕ್ರಮ..!

Next Post

ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!

ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check