• ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಅಡಿಯಲ್ಲಿ ಉತ್ತರ ಪ್ರದೇಶ ರಾಜ್ಯಾದ್ಯಂತ ಒಟ್ಟು 3,900 ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಪ್ರಮಾಣಪತ್ರ ಪಡೆದಿದ್ದಾರೆ.
• ಈ ಕಾರ್ಯಕ್ರಮದ ಅಡಿಯಲ್ಲಿ ಉತ್ತರ ಪ್ರದೇಶದ ಒಟ್ಟು 5,000 ಯುವಕರಿಗೆ ತರಬೇತಿ ನೀಡುವ ಗುರಿಯನ್ನು ಸ್ಯಾಮ್‌ಸಂಗ್ ಹೊಂದಿದೆ.
• ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಈ ಯೋಜನೆಯು ಎಐ, ಐಓಟಿ, ಬಿಗ್ ಡೇಟಾ, ಕೋಡಿಂಗ್ ಮತ್ತು ಸಾಫ್ಟ್ ಸ್ಕಿಲ್ಸ್ ಗಳನ್ನು ಯುವಜನತೆಗೆ ಕಲಿಸುತ್ತಿದೆ.
ಬೆಂಗಳೂರು, ಭಾರತ – ಜನವರಿ 15, 2026:* ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆದ ಸ್ಯಾಮ್‌ಸಂಗ್, ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ತನ್ನ ಅತ್ಯಂತ ಪ್ರಮುಖ ‘ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್’ (ಎಸ್ಐಸಿ) ಯೋಜನೆಯ ಅಡಿಯಲ್ಲಿ ಉತ್ತರ ಪ್ರದೇಶದ 1,750 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಪ್ರಮಾಣಪತ್ರಗಳನ್ನು ವಿತರಿಸಿದೆ.
ಈ ಪ್ರಮಾಣಪತ್ರ ವಿತರಣಾ ಸಮಾರಂಭವು ಲಕ್ನೋದ ಸಿಟಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಅದ್ದೂರಿಯಾಗಿ ನಡೆದಿದ್ದು, ಉತ್ತರ ಪ್ರದೇಶ ಸರ್ಕಾರದ ಗೌರವಾನ್ವಿತ ಉನ್ನತ ಶಿಕ್ಷಣ ಸಚಿವರಾದ ಶ್ರೀಮತಿ ರಜನಿ ತಿವಾರಿ ಅವರ ಉಪಸ್ಥಿತಿಯಲ್ಲಿ ಜರುಗಿತು. ಶೈಕ್ಷಣಿಕ ಕ್ಷೇತ್ರದ ಮುಖಂಡರು ಮತ್ತು ಪಾಲುದಾರರು ಉಪಸ್ಥಿತರಿದ್ದರು.
ಈ ಬ್ಯಾಚ್‌ನೊಂದಿಗೆ, ಉತ್ತರ ಪ್ರದೇಶದಲ್ಲಿ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಅಡಿಯಲ್ಲಿ ತರಬೇತಿ ಪಡೆದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 3,900ಕ್ಕೆ ತಲುಪಿದೆ. ಉತ್ತರ ಪ್ರದೇಶವು ಈ ಯೋಜನೆಯ ಅಡಿಯಲ್ಲಿ ಕೌಶಲ್ಯಾಭಿವೃದ್ಧಿಯಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆರು ಪಟ್ಟು ಹೆಚ್ಚಳವಾಗಿದ್ದು, ರಾಷ್ಟ್ರಮಟ್ಟದಲ್ಲಿ ಒಟ್ಟು 20,000 ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡುವ ಗುರಿಯನ್ನು ಸ್ಯಾಮ್‌ಸಂಗ್ ಹೊಂದಿದೆ. ಇದರ ಭಾಗವಾಗಿ ಉತ್ತರ ಪ್ರದೇಶವೊಂದರಲ್ಲೇ ಒಟ್ಟು 5,000 ಯುವಕರಿಗೆ ತರಬೇತಿ ನೀಡುವ ಉದ್ದೇಶವನ್ನು ಕಂಪನಿ ಘೋಷಿಸಿದೆ. ಈ ಕಾರ್ಯಕ್ರಮವು ಸದ್ಯ ದೇಶದ 10 ರಾಜ್ಯಗಳಲ್ಲಿ ನಡೆಯುತ್ತಿದೆ.
ಲಕ್ನೋ ಯೋಜನೆ ಅಡಿಯಲ್ಲಿ, ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳಲ್ಲಿ ಉದ್ಯಮ-ಆಧಾರಿತ ತರಬೇತಿಯನ್ನು ಪಡೆದರು. ಇದರಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (950 ವಿದ್ಯಾರ್ಥಿಗಳು), ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ (550 ವಿದ್ಯಾರ್ಥಿಗಳು), ಬಿಗ್ ಡೇಟಾ (150 ವಿದ್ಯಾರ್ಥಿಗಳು) ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (100 ವಿದ್ಯಾರ್ಥಿಗಳು) ತರಬೇತಿ ಒಳಗೊಂಡಿದೆ.
*ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ಸೌತ್ ವೆಸ್ಟ್ ಏಷ್ಯಾದ ಸಿಎಸ್‌ಆರ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥರಾದ ಶುಭಂ ಮುಖರ್ಜಿ* ಅವರು, “ಭಾರತದ ಯುವಜನತೆಯಿಂದ ದೇಶದ ನಿರ್ಧರಿಸಲ್ಪಡುತ್ತದೆ ಎಂಬುದು ಸ್ಯಾಮ್‌ಸಂಗ್‌ನ ದೃಢವಾದ ನಂಬಿಕೆಯಾಗಿದೆ. ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಅನ್ನು ಶಿಕ್ಷಣ ಮತ್ತು ಉದ್ಯಮದ ನಡುವಿನ ಅಂತರವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಇದು ಎಐ, ಐಓಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ನಂತಹ ಫ್ಯೂಚರ್- ಟೆಕ್ ಕೋರ್ಸ್‌ಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ನೀಡುತ್ತದೆ. ಲಕ್ನೋದ 1,750 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿರುವುದು ಭಾರತ ಸರ್ಕಾರದ ಕೌಶಲ ಅಭಿವೃದ್ಧಿ ದೃಷ್ಟಿಕೋನಕ್ಕೆ ಬೆಂಬಲ ನೀಡುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ನಮ್ಮ ಈ ಪ್ರಮುಖ ಯೋಜನೆಯು ಮುಂದಿನ ಪೀಳಿಗೆಯನ್ನು ಸಬಲೀಕರಿಸಲು ಮತ್ತು ಅವರನ್ನು ನಾಲ್ಕನೇ ಕೈಗಾರಿಕಾ ಕ್ರಾಂತಿಗೆ ಸನ್ನದ್ಧಗೊಳಿಸಲು ರೂಪಿಸಲಾಗಿದೆ” ಎಂದು ತಿಳಿಸಿದರು.
*ಉತ್ತರ ಪ್ರದೇಶ ಸರ್ಕಾರದ ಗೌರವಾನ್ವಿತ ಉನ್ನತ ಶಿಕ್ಷಣ ಸಚಿವರಾದ ಶ್ರೀಮತಿ ರಜನಿ ತಿವಾರಿ ಅವರು ಮಾತನಾಡಿ,* “ಉನ್ನತ ಶಿಕ್ಷಣ ವಿಭಾಗವು ಅಭಿವೃದ್ಧಿ ಹೊಂದುತ್ತಿರುವ ಈ ಕಾಲಘಟ್ಟದಲ್ಲಿ, ಕಲಿಕೆಯ ಫಲಿತಾಂಶಗಳು ಹೊಸ ಕಾಲದ ಆರ್ಥಿಕ ಮತ್ತು ತಾಂತ್ರಿಕ ಅಗತ್ಯಗಳಿಗೆ ಅನುಗುಣವಾಗಿರುವುದು ಅತ್ಯಗತ್ಯ. ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಸುಧಾರಿತ ಡಿಜಿಟಲ್ ಕಲಿಕೆ ಮತ್ತು ಪ್ರಾಯೋಗಿಕ ಕಲಿಕೆಯನ್ನು ಪರಿಚಯಿಸುವ ಮೂಲಕ ಗಮನಾರ್ಹ ಕೆಲಸ ಮಾಡುತ್ತಿದೆ. ಇಂತಹ ಸಹಯೋಗಗಳು ನಮ್ಮ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುತ್ತವೆ ಮತ್ತು ಉತ್ತರ ಪ್ರದೇಶದಲ್ಲಿ ಜ್ಞಾನ ಆಧಾರಿತ ಹಾಗೂ ಸ್ಪರ್ಧಾತ್ಮಕ ಕಾರ್ಯಪಡೆಯನ್ನು ಸೃಷ್ಟಿಸಲು ಸಹಾಯ ಮಾಡುತ್ತವೆ. ನಮ್ಮ ಯುವಜನತೆಯನ್ನು ಸಬಲೀಕರಿಸುವಲ್ಲಿ ಮತ್ತು ಭವಿಷ್ಯಕ್ಕೆ ಸನ್ನದ್ಧವಾದ ಕೌಶಲಯುತ ಕಾರ್ಯಪಡೆಯನ್ನು ನಿರ್ಮಿಸುವ ರಾಜ್ಯದ ದೃಷ್ಟಿಕೋನಕ್ಕೆ ಬೆಂಬಲ ನೀಡುತ್ತಿರುವ ಸ್ಯಾಮ್‌ಸಂಗ್ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ನಮ್ಮ ಯುವಜನತೆಯೇ ಉತ್ತರ ಪ್ರದೇಶದ ಪ್ರಗತಿಯ ಅಡಿಪಾಯ ಮತ್ತು ಭಾರತದ ಬೆಳವಣಿಗೆಯ ಹಿಂದಿನ ಪ್ರೇರಕ ಶಕ್ತಿಯಾಗಿದ್ದಾರೆ” ಎಂದು ತಿಳಿಸಿದರು.
2022ರಲ್ಲಿ ಭಾರತದಲ್ಲಿ ಪ್ರಾರಂಭವಾದ ‘ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್’ ಯೋಜನೆಯು ವಿಶೇಷವಾಗಿ ಸೌಲಭ್ಯವಂಚಿತ ಮತ್ತು ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆಯನ್ನು ಒದಗಿಸುವತ್ತ ಗಮನ ಹರಿಸಿದೆ. ಈ ಕಾರ್ಯಕ್ರಮವನ್ನು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ ಸಹಯೋಗದೊಂದಿಗೆ ಮಾನ್ಯತೆ ಪಡೆದ ತರಬೇತಿ ಪಾಲುದಾರರ ಮೂಲಕ ಜಾರಿಗೆ ತರಲಾಗುತ್ತಿದೆ.
ರಾಷ್ಟ್ರಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮವು ಶೇ. 44 ರಷ್ಟು ಮಹಿಳಾ ಭಾಗವಹಿಸುವಿಕೆಯನ್ನು ಹೊಂದಿದ್ದು, ಇದು ಒಳಗೊಳ್ಳುವಿಕೆ ಮತ್ತು ಸಮಾನ ಕೌಶಲ ಅಭಿವೃದ್ಧಿಯ ಮೇಲೆ ಸ್ಯಾಮ್‌ಸಂಗ್ ಹೊಂದಿರುವ ಆಸಕ್ತಿಯನ್ನು ತೋರಿಸುತ್ತದೆ. ತಾಂತ್ರಿಕ ತರಬೇತಿಯ ಜೊತೆಗೆ, ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ಮತ್ತು ಉದ್ಯೋಗ ಸಿದ್ಧತೆಯನ್ನು ಸುಧಾರಿಸಲು ಪ್ಲೇಸ್‌ಮೆಂಟ್ ನೆರವನ್ನು ಕೂಡ ನೀಡಲಾಗುತ್ತದೆ.






