ಉಡುಪಿ ಜನವರಿ 16 : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಜನವರಿ 17 ರಂದು ಬೆಳಗ್ಗೆ 10 ಗಂಟೆಯಿಂದ ಜ. 18 ರ ಸಂಜೆ 6 ಗಂಟೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಹಾಗೂ ಪಡುತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ (10-15 ಕಿ.ಮೀ) ಜನವರಿ 17 ರಂದು ಬೆಳಗ್ಗೆ 10 ಗಂಟೆಯಿಂದ ಜ. 18 ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.






