ಉಡುಪಿ:ಜನವರಿ 20 : ಉಡುಪಿಯ ವಿದ್ಯಾರ್ಥಿಯೊಬ್ಬ ಲೋಡ್ ಶೆಡ್ಡಿಂಗ್ ಮಾಡದಂತೆ ಸಿಎಂ ಸಿದ್ದರಾಮಯ್ಯ ನವರಿಗೆ ಮನವಿ ಮಾಡಿದ್ದಾನೆ.
ಪರೀಕ್ಷೆ ಹತ್ರ ಬರ್ತಿದೆ..ಪವರ್ ಕಟ್ ಮಾಡಬೇಡಿ ಹಾಗೂ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಕರ್ನಾಟಕ ಸರಕಾರವನ್ನು ಒತ್ತಾಯಿಸಿ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಮುಖ್ಯಮಂತ್ರಿ ಯವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾನೆ.
ಕುಂಜಿಬೆಟ್ಟು ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಶೆಣೈ, ತಮ್ಮ ಪ್ರದೇಶದಲ್ಲಿ ನಡೆಯುತ್ತಿರುವ ಅಘೋಷಿತ ವಿದ್ಯುತ್ ಕಡಿತಗಳ ಹಿನ್ನೆಲೆಯಲ್ಲಿ ಸಿಎಂ ಗೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳಿಗಾಗಿ ಮುಂಜಾನೆ ಹಾಗೂ ರಾತ್ರಿ ಅಧ್ಯಯನ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಒದಗಿಸಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗುತ್ತಿದ್ದು, ಇದು ಓದಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಹೀಗಾಗಿ ಸ್ಪಂದಿಸುವಂತೆ ಪತ್ರದ ಲ್ಲಿ ಮನವಿ ಮಾಡಲಾಗಿದೆ.






