Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ:ಸಾರಿಗೆ ಸಚಿವ ರಾಮಲಿಂಗ ರೆಡ್ಡಿ..!

Dhrishya News by Dhrishya News
22/01/2026
in ಸುದ್ದಿಗಳು
0
ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ:ಸಾರಿಗೆ ಸಚಿವ ರಾಮಲಿಂಗ ರೆಡ್ಡಿ..!
0
SHARES
19
VIEWS
Share on FacebookShare on Twitter

ಬೆಂಗಳೂರು, ಜನವರಿ 21: ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್ ಗಳ ಬಾಡಿ ಬಿಲ್ಡಿಂಗ್ ಮಾಡಬೇಕು?

ಎಷ್ಟು ಎಮರ್ಜೆನ್ಸಿ ಡೋರ್ ಇಡಬೇಕು? ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ 8 ನಿಯಮಗಳ ಕಡ್ಡಾಯ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಯಾವ ರೀತಿಯಲ್ಲಿ ಮಾಹಿತಿ ನೀಡಬೇಕು? ಫೈರ್ ಎಸ್ಟಿಂಗ್ ವಿಷರ್ ಗಳನ್ನು ಅಳವಡಿಸುವ ಬಗ್ಗೆ,ಎಮರ್ಜೆನ್ಸಿ ಎಕ್ಸಿಟ್ ಡೋರ್ ಗಳ ಬಳಿ ಯುವಕರು ಮತ್ತು ಮಧ್ಯ ವಯಸ್ಕರಿಗೆ ಸೀಟ್ ನೀಡಬೇಕು, ಎಸಿ ಬಸ್ಸುಗಳಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ ನಂದಿಸಬೇಕು? ಹೊರಗೆ ಬರಲು ಗ್ಲಾಸ್ ಹೊಡೆಯಲು ಹ್ಯಾಮರ್ ಗಳನ್ನು ಇಡಬೇಕು? ಪ್ರಯಾಣಿಕರು ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ವ್ಯವಸ್ಥೆ ಮಾಡಬೇಕು, ಬೆಂಕಿ ಕಾಣಿಸಿಕೊಂಡರೇ ಪ್ರಯಾಣಿಕರಿಗೆ ಡ್ರೈವರ್ ಅಲರಾಂ ನೀಡಬೇಕು. ಹೀಗೆ ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪನಿಗಳಿಗೆ ಸಾರಿಗೆ ಸಚಿವರು ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ಸ್ಲೀಪರ್ ಬಸ್ ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು.

ಸ್ಲೀಪರ್ ಬರ್ತ್ ಗಳಲ್ಲಿ ಸ್ಲೈಡರ್ ತೆಗೆಯಬೇಕು

ಫೈರ್ ಡಿಟೆಕ್ಷನ್ ಅನ್ನ ತಿಂಗಳೊಳಗೆ ಅಳವಡಿಸಬೇಕು

10ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ

ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್

ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ

ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್ ಸಿ ಮಾಡಬೇಕು

ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು

ಇನ್ನೂ ಗುಜರಾತಿನ 41 ವಾಹನಗಳಿಗೆ ಕೋರಮಂಗಲ ಆರ್ಟಿಓ ಕಚೇರಿಯಲ್ಲಿ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಬಗ್ಗೆ ಟಿವಿ9 ನಿನ್ನೆ ಸುದ್ದಿ ಪ್ರಸಾರ ಮಾಡಿತ್ತು. ರೂಲ್ಸ್ ಪ್ರಕಾರ ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆ ಪ್ರಕಾರ, ಯಾವುದೇ ರಾಜ್ಯದಲ್ಲಾದರೂ ವಾಹನಗಳ ಎಫ್‌ಸಿ ಮಾಡಿಸಿಕೊಳ್ಳಲು ಅವಕಾಶವಿದೆ. ಆದರೆ, ವಾಹನವವನ್ನು ಖುದ್ದು ಆರ್‌ಟಿಒ ಮುಂದೆ ಹಾಜರುಪಡಿಸಿದ ನಂತರ ಪರಿಶೀಲನೆ ನಡೆಸಿಯೇ ಎಫ್​ಸಿ ನೀಡಬೇಕು ಎಂಬ ನಿಯಮವಿದೆ. ಆದರೆ, ಕೋರಮಂಗಲ ಆರ್‌ಟಿಒ ಅಧಿಕಾರಿಗಳು, ವಾಹನಗಳು ಇಲ್ಲಿಗೆ ಬಂದಿದ್ದವು, ನಾವು ಖುದ್ದಾಗಿ ಪರಿಶೀಲಿಸಿದ್ದೇವೆ ಎಂದು ಸುಳ್ಳು ಹೇಳಿ ಎಫ್‌ಸಿಗಳನ್ನು ನೀಡಿದ್ದರು.

ಆ ಸಮಯದಲ್ಲಿ ಆ ವಾಹನಗಳು ಗುಜರಾತ್‌ನಲ್ಲಿ ಸಂಚರಿಸುತ್ತಿರುವುದನ್ನು ಅಲ್ಲಿನ ಸಾರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಸಮೇತ ಬಹಿರಂಗಪಡಿಸಿದ್ದರು. ಈ ಸಂಬಂಧ ಕೋರಮಂಗಲ ಆರ್‌ಟಿಒದ ಹಿರಿಯ ಮೋಟಾರು ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಇತ್ತ ಸಾರಿಗೆ ಇಲಾಖೆಯ ಸೂಚನೆಗೆ ಖಾಸಗಿ ಬಸ್ ಮಾಲೀಕರ ಸಂಘ ನಾವು ಸಾರಿಗೆ ರೂಲ್ಸ್ ಅಳವಡಿಸಿಕೊಳ್ಳುತ್ತೇವೆ. ಆದರೆ ಅದಕ್ಕೆ 6 ತಿಂಗಳುಗಳ ಕಾಲಾವಕಾಶ ‌ಬೇಕು ಎಂದು ಮನವಿ ಮಾಡಿದ್ದಾರೆ.

Previous Post

ಬೆಂಗಳೂರಿನಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆ ಎಐ ಎಂಜಿನಿಯರ್: ಲಿಂಕ್ಡ್‌ ಇನ್ ‘ಜಾಬ್ಸ್ ಆನ್ ದಿ ರೈಸ್ 2026’ ವರದಿ ಬಿಡುಗಡೆ..!!

Next Post

ಉಡುಪಿ :ಖ್ಯಾತ ಹಿನ್ನಲೆ ಗಾಯಕ ಡಾ.ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಖ್ಯಾತ ಹಿನ್ನಲೆ ಗಾಯಕ ಡಾ.ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ’..!!

ಉಡುಪಿ :ಖ್ಯಾತ ಹಿನ್ನಲೆ ಗಾಯಕ ಡಾ.ವಿಜಯಪ್ರಕಾಶ್ ತಂಡದಿಂದ 'ಶಾಸ್ತ್ರೀಯ ಮತ್ತು ಭಕ್ತಿಗೀತೆ'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved